ಕೋಮಾ ಸ್ಥಿತಿಯಲ್ಲಿ ವಿ.ಧನಂಜಯಕುಮಾರ್

7

ಕೋಮಾ ಸ್ಥಿತಿಯಲ್ಲಿ ವಿ.ಧನಂಜಯಕುಮಾರ್

Published:
Updated:
Deccan Herald

ಮಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ನಗರದ ಯೂನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

67 ವರ್ಷ ವಯಸ್ಸಿನ ಧನಂಜಯಕುಮಾರ್‌ ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಾಲ್ಕು ತಿಂಗಳ ಹಿಂದೆ ತೀವ್ರ ಅಸ್ವಸ್ಥರಾದ ಬಳಿಕ ಯೂನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರು ಕೋಮಾ ಸ್ಥಿತಿಯಲ್ಲೇ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯಕುಮಾರ್‌, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಬಿ.ಎಸ್‌.ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪಿಸಿದ್ದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು. ಆ ಬಳಿಕ ಕಾಂಗ್ರೆಸ್‌ ಸೇರಿದ್ದರು.

ಬರಹ ಇಷ್ಟವಾಯಿತೆ?

  • 2

    Happy
  • 3

    Amused
  • 5

    Sad
  • 2

    Frustrated
  • 1

    Angry

Comments:

0 comments

Write the first review for this !