ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಿಸಿ

7
ಮುತ್ತಲಗೇರಿ ರೈತನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಟ್ವೀಟ್

ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಿಸಿ

Published:
Updated:
Deccan Herald

ಬಾಗಲಕೋಟೆ: ಗಂಗಾಕಲ್ಯಾಣ ಯೋಜನೆಯಡಿ ಹೊಲದಲ್ಲಿ ಕೊಳವೆ ಬಾವಿ ಕೊರೆದು 6 ತಿಂಗಳಾದರೂ ಹೆಸ್ಕಾಂನವರು ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ನೀವಾದರೂ ನೆರವಿಗೆ ಬನ್ನಿ..

ಇದು ಬಾದಾಮಿ ತಾಲ್ಲೂಕಿನ ಮುತ್ತಲಗೇರಿಯ ರೈತ ಟೋಪಣ್ಣ ಹಳ್ಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕ್ಷೇತ್ರದ ಶಾಸಕರೂ ಆದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಗುರುವಾರ ಟ್ವೀಟ್ ಮೂಲಕ ಮೇಲಿನಂತೆ ಮನವಿ ಮಾಡಿದ್ದಾರೆ.

ರೈತನ ನೋವು ನಿಮಗೆ ಕಾಣಿಸುತ್ತಿಲ್ಲವೇ? ಎಂದು ಪ್ರಶ್ನಿಸಿರುವ ಅವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೂ ಅದನ್ನು ಟ್ಯಾಗ್ ಮಾಡಿದ್ದಾರೆ.

 

 

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !