ಸೋಮವಾರ, ಮಾರ್ಚ್ 8, 2021
24 °C

ಶಿಬಿರಗಳು ಜ್ಞಾನ ವೃದ್ಧಿಗೆ ಪೂರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ‘ಸ್ಕೌಟ್ಸ್ ಮತ್ತು ಸಂಸ್ಥೆಯ ಶಿಬಿರಗಳು ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪೂರಕವಾಗಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಚೌಡಪ್ಪ ತಿಳಿಸಿದರು.

ನಗರದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಗ್ರಗಾಮಿತ್ವ ತರಬೇತಿ ಶಿಬಿರದಲ್ಲಿ ಮಾತನಾಡಿ, ‘ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡರೆ ಸಾಕು ಎಂಬ ಮಾನೋಭಾವನೆಯಿಂದ ಪೋಷಕರು ಹೊರಬರಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳು ತರಬೇತಿ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡದಿಂದ ಹೊರ ಬರಲು ಸಹಕಾರಿಯಾಗುತ್ತದೆ. ಸೇವಾಮಾನೋಭಾವ ರೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಭಾಗಿಯಾಗುತ್ತಾರೆ’ ಎಂದರು.

‘ವಿದ್ಯಾಭ್ಯಾಸದ ಜತೆಗೆ ವ್ಯವಹಾರಿಕ ಜ್ಞಾನದ ಅವಶ್ಯಕತೆ ಇದೆ. ಅಂಕಗಳಿಕೆಯ ಯಂತ್ರದ ಬದಲು ಸಾಮಾಜಿಕ ಮಾನೋಭಾವ ಬೆಳೆಸಿಕೊಳ್ಳುವ ಶಕ್ತಿಯಾಗಿ ಹೊರಹೊಮ್ಮಬೇಕು’ ಎಂದು ಸಂಸ್ಥೆಯ ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು ಸಲಹೆ ನೀಡಿದರು.

‘ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಪರಿವರ್ತನೆಯ ಪರ್ವ ಕಾಲವಾಗಿದ್ದು, ಇದಕ್ಕೆ ಪೋಷಕರು ಹಾಗೂ ಶಿಕ್ಷಕರು ಸಹಕಾರ ನೀಡಬೇಕು. ಮಾನವಿಯ ಮೌಲ್ಯಗಳ ಹಾಗೂ ಭಾವನಾತ್ಮಕ ದೃಷ್ಠಿಕೋನ ಬೆಳೆಲು ಸಂಸ್ಥೆ ಪೂರಕವಾಗಿದೆ’ ಂದರು.

ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ್ ಶಿಬಿರದ ಪೂರ್ವತಯಾರಿ ಚಟುವಟಿಕೆಗಳ ಕುರಿತು ತರಬೇತಿ ನೀಡಿದರು.

ಶಿಕ್ಷಣ ಸಂಯೋಜಕ ಶ್ರೀನಿವಾಸನ್, ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಆರ್.ಸುರೇಶ್, ಜಿಲ್ಲಾ ಸಂಘಟಕ ವಿಶ್ವನಾಥ್, ರೇಂಜರ್ ಲೀಡರ್ ವನಜಾ, ಸ್ಕೌಟ್ ತರಬೇತುದಾರರಾದ ಜಯಕುಮಾರ್, ವಿನಯ್, ಸಂತೋಷ್, ನಿರಂಜನ್, ಕಿಶೋರ್, ದಿಲೀಫ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು