ಅತಿಥಿ ಉಪನ್ಯಾಸಕರ ಅಹೋರಾತ್ರಿ ಧರಣಿ 11ರಿಂದ

7

ಅತಿಥಿ ಉಪನ್ಯಾಸಕರ ಅಹೋರಾತ್ರಿ ಧರಣಿ 11ರಿಂದ

Published:
Updated:

ಮಂಡ್ಯ: ‘ಪದವಿ ಕಾಲೇಜುಗಳಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರ ಜೀತಪದ್ಧತಿ ವಿಮುಕ್ತಗೊಳ್ಳಬೇಕು. ಸೇವಾ ಭದ್ರತೆ ಒದಗಿಸಬೇಕು ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಡಿ.11ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ರಾಜ್ಯ ಘಟಕದ ಗೌರವಾಧ್ಯಕ್ಷ ನಾಗರಾಜು ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದಾಗಿ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದರು. ಅಲ್ಲದೇ ಈ ಕುರಿತು ತಮ್ಮ ಪ್ರಣಾಳಿಕೆಯಲ್ಲಿ ಪ್ರಕಟಣೆ ಮಾಡಿದ್ದರು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ದೆಹಲಿ ಸರ್ಕಾರ 17 ಸಾವಿರ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿದೆ. ಈ ಹಕ್ಕನ್ನು ಪಡೆಯುವ ಸಲುವಾಗಿ ಹೋರಾಟ ಅನಿವಾರ್ಯವಾಗಿದೆ. ಚಳಿಗಾಲದ ಅಧಿವೇಶನ ಮುಗಿಯುವುದರೊಳಗೆ ಸೇವಾ ಭದ್ರತೆ ಒದಗಿಸಬೇಕು’ ಎಂದರು.

‘ರಾಜ್ಯದ 411 ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಅವರನ್ನು ಬಿಟ್ಟು ಈಗ ಮೂರು ಸಾವಿರ ಉಪನ್ಯಾಸಕರ ನೇಮಕಾತಿಗೆ ಮುಂದಾಗಿರುವುದು ಸರಿಯಲ್ಲ. ಕಳೆದ ಒಂದು ಸೆಮಿಸ್ಟರ್‌ನಿಂದ ಅತಿಥಿ ಉಪನ್ಯಾಸಕರಿಗೆ ವೇತನ ಬಂದಿಲ್ಲ. ಇದರಿಂದ ದಿನನಿತ್ಯದ ಜೀವನ ನಡೆಸಲು ಕಷ್ಟಕರವಾಗಿದೆ. ಕೂಡಲೇ ವೇತನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು. ಡಾ.ಎಸ್.ಶ್ರೀನಿವಾಸ್, ವೀರಪ್ಪ, ಪರಮೇಶ್, ಕುಮಾರ್ ಉಪಸ್ಥಿತರಿದ್ದರು

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !