ಭಾನುವಾರ, ಡಿಸೆಂಬರ್ 15, 2019
25 °C
ಪೊಲೀಸರಿಂದ ಮೂವರು ಯುವತಿಯರ ರಕ್ಷಣೆ

ವೇಶ್ಯಾವಾಟಿಕೆ: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಸುರತ್ಕಲ್‌ನ ಇಡ್ಯಾ ಗ್ರಾಮದ ಮನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿರುವ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿ, ಒಬ್ಬ ದಲ್ಲಾಳಿಯನ್ನು ಬಂಧಿಸಿದ್ದಾರೆ.

ಮನೆಯೊಂದರಲ್ಲಿ ಯುವತಿಯರನ್ನು ಕೂಡಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ನಗರ ಅಪರಾಧ ಘಟಕದ (ಸಿಸಿಬಿ) ಸಬ್‌ ಇನ್‌ಸ್ಪೆಕ್ಟರ್‌ ಕಬ್ಬಾಳ್‌ ರಾಜ್‌ ಮತ್ತು ಸುರತ್ಕಲ್‌ ಠಾಣೆ ಇನ್‌ಸ್ಪೆಕ್ಟರ್‌ ಕೆ.ರಾಮಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮನೆಯ ಮೇಲೆ ದಾಳಿಮಾಡಿ ಶೋಧ ನಡೆಸಿದ್ದರು.

‘ಮನೆಯಲ್ಲಿ ಮೂವರು ಯುವತಿಯರು ಪತ್ತೆಯಾಗಿದ್ದರು. ಗ್ರಾಹಕರಾಗಿ ಬಂದಿದ್ದ ಇಬ್ಬರು ಪುರುಷರೂ ಇದ್ದರು. ಪುನೀತ್‌ಕುಮಾರ್‌ ಎಂಬಾತ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಅವರೆಲ್ಲರೂ ವಿಚಾರಣೆ ವೇಳೆ ಹೇಳಿಕೆ ನೀಡಿದ್ದರು. ಆರೋಪಿಯನ್ನು ಬಂಧಿಸಿ, ₹ 51,450 ನಗದು, ಮೊಬೈಲ್‌ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಯುವತಿಯರನ್ನು ರಕ್ಷಿಸಿ, ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)