ಶನಿವಾರ, ಮಾರ್ಚ್ 6, 2021
32 °C

ಕನಕ ಜಯಂತಿಗೆ ಸಾಂಸ್ಕೃತಿಕ ಕಲಾ ತಂಡಗಳು ಮೆರಗು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ಕನಕಜಯಂತಿ ಅಂಗವಾಗಿ ನಗರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕುರುಬರ ಸಂಘದಿಂದ ಭಾನುವಾರ ಆಯೋಜಿಸಿದ್ದ ಪಲ್ಲಕ್ಕಿ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡಗಳು ಮೆರಗು ನೀಡಿದವು.

ನಗರದ ಕನಕ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಸಂಸದ ಕೆ.ಎಚ್.ಮುನಿಯಪ್ಪ, ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್, ಶಾಸಕರಾದ ಕೆ.ಶ್ರೀನಿವಾಸಗೌಡ, ಎಸ್.ಎನ್‌.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಜಿಲ್ಲಾಧಿಕಾರಿ ಜೆ.ಮಂಜುನಾಥ್, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಹನುಮಪ್ಪ ಪೂಜೆ ಸಲ್ಲಿಸಿದ ನಂತರ ಪಲ್ಲಕ್ಕಿ ಮೆರವಣಿಗೆ ಚಾಲನೆ ನೀಡಿದರು.

ವಿವಿಧ ಕಲಾ ತಂಡಗಳು ವೇಷ ಭೂಷಣ ಹಾಗೂ ಕೆಲೆಗಾರಿಕೆ ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಮೆರಗು ನೀಡಿದವು. ಡೊಳ್ಳು ಕುಣಿತ, ವ್ಯಾದ್ಯ ಗೋಷ್ಠಿ, ತಮಟೆ, ಹುಲಿ ವೇಶಧಾರಿ, ವೀರಗಾಸೆ ಸೇರಿದಂತೆ 20ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು. ಸಂಸದ ಕೆ.ಎಚ್.ಮುನಿಯಪ್ಪ ಏಕದಂಡ ಪ್ರದರ್ಶನ ಮಾಡಿದರು.

ನಗರದ ರಂಗಮಂದಿರದಿಂದ ಆರಂಭವಾದ ಪಲ್ಲಕ್ಕಿ ಮೆರವಣಿಗೆ ಎಂಬಿ ರಸ್ತೆ, ಎಂಜಿ ರಸ್ತೆ, ಬಸ್‌ ನಿಲ್ದಾಣದ ವೃತ್ತ, ಕಾಳಮ್ಮಗುಡಿ ರಸ್ತೆಯಲ್ಲಿ ಸಾಗಿ ಮೆಕ್ಕೆ ವೃತ್ತದತನಕ ನಡೆಯಿತು. ಕೆಎಸ್‌ಆರ್‌ಟಿಸಿ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪಲ್ಲಕ್ಕಿ ಮೆರವಣಿಗೆ ನಡೆಸಿದರು. ಕುರುಬ ಸಮುದಾಯದ ಮುಖಂಡರು ತೆಂಗಿನ ಕಾಯಿ ಶಾಸ್ತ್ರ ನಡೆಸಿದರು.

ಕನಕದಾಸರ ಜಯಂತಿಯ ವೇದಿಕೆ ಕಾರ್ಯಕ್ರಮ ನಗರ ಪ್ರವಾಸಿ ಮಂದಿರದ ಮುಂದೆ ಹಾಕಿದ್ದರಿಂದ ಡೂಂ ಲೈಟ್‌ ವೃತ್ತದಿಂದ – ಬಂಗಾರಪೇಟೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗತಿಗೊಳಿಸಲಾಗಿತ್ತು. ಯಾವುದೇ ಅಹಿತರಕರ ಘಟನೆಗಳು ಸಂಭವಿಸದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.