ನೂತನ ಸಂಚಾರ ಪೊಲೀಸ್ ಠಾಣೆ ಉದ್ಘಾಟನೆ

7
ನಗರದ ಎಪಿಎಂಸಿ ಮಾರುಕಟ್ಟೆಯಿಂದ ಡಿವೈಎಸ್ಪಿ ಕಚೇರಿ ಆವರಣಕ್ಕೆ ಸ್ಥಳಾಂತರ

ನೂತನ ಸಂಚಾರ ಪೊಲೀಸ್ ಠಾಣೆ ಉದ್ಘಾಟನೆ

Published:
Updated:
Deccan Herald

ಚಿಕ್ಕಬಳ್ಳಾಪುರ: ನಗರದ ಎಪಿಎಂಸಿ ಮಾರುಕಟ್ಟೆಯಿಂದ ಎಂ.ಜಿ.ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿ ಆವರಣಕ್ಕೆ ಸಂಚಾರ ಪೊಲೀಸ್ ಠಾಣೆ ಸ್ಥಳಾಂತರಿಸಿದ್ದು, ಹೊಸ ಠಾಣೆಯನ್ನು ಎಸ್‌ಪಿ ಕಾರ್ತಿಕ್ ರೆಡ್ಡಿ ಅವರು ಸೋಮವಾರ ಉದ್ಘಾಟಿಸಿದರು.

ಡಿವೈಎಸ್ಪಿ ಕಚೇರಿ ಆವರಣದಲ್ಲಿದ್ದ ತಂಗುದಾಣ ಕಟ್ಟಡವನ್ನೇ ನವೀಕರಿಸಿ ಸಂಚಾರ ಪೊಲೀಸ್ ಠಾಣೆಗೆ ಒದಗಿಸಲಾಗಿದೆ. ನಂಗಲಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಅನಿಲ್‌ಕುಮಾರ್ ಅವರನ್ನು ಕಾರ್ಯಕ್ರದಲ್ಲಿ ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷ ಮುನಿಕೃಷ್ಣ, ನಗರಸಭೆ ಆಯುಕ್ತ ಉಮಾಕಾಂತ್, ಡಿವೈಎಸ್ ಪಿ.ಪ್ರಭುಶಂಕರ್, ಸರ್ಕಲ್ ಇನ್‌ಸ್ಪೆಕ್ಟರ್ ಸುದರ್ಶನ್, ನಗರ ಠಾಣೆಯ ಎಸ್‌ಐ ವರುಣ್ ಕುಮಾರ್ ಗ್ರಾಮಾಂತರ ಠಾಣೆ ಎಸ್‌ಐ ವೆಂಕಟೇಶ್, ಸಮಾಜ ಸೇವಕ ಹೋಟೆಲ್ ಶಿವರಾಮು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !