ಶನಿವಾರ, ಫೆಬ್ರವರಿ 27, 2021
21 °C
ಕರ್ನಾಟಕ ಜನಪರ ವೇದಿಕೆ

ಕುಡಿಯುವ ನೀರು ಹರಿಸಲು ಒತ್ತಾಯಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ಮೇಕೆದಾಟು ಯೋಜನೆಯಿಂದ ಅವಿಭಜಿತ ಕೋಲಾರ ಜಿಲ್ಲೆಗೆ ಕುಡಿಯುವ ನೀರು ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರ ಗಾಂಧಿ ವನದಲ್ಲಿ ಸೋಮವಾರ ಧರಣಿ ನಡೆಸಿದರು.

‘ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಬರಪರಿಸ್ಥಿತಿ ಎದುರಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಿಲ್ಲೆಯನ್ನು ನೀರಿನ ಸೌಕರ್ಯದಿಂದ ವಂಚಿಸಿಕೊಂಡು ಬರುತ್ತಿವೆ’ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸುಬ್ರಮಣಿ ಆರೋಪಿಸಿದರು.

‘ಬಯಲುಸೀಮೆ ಜಿಲ್ಲೆಗಳಿಗೆ ನೀರಾವರಿ ಯೋಜನೆ ಅನುಷ್ಟಾನಗೊಳಿಸಲು ಎತ್ತಿಯೊಳೆ, ಯರಗೋಳ್, ಕೆಸಿ ವ್ಯಾಲಿ ಹೀಗೆ ಅನೇಕ ಹೆಸರುಗಳನ್ನು ನಾಮಕಾರಣ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೆಸಿ ವ್ಯಾಲಿ ಯೋಜನೆಯ ಮೂಲಕ ಬೆಂಗಳೂರಿನ ಕೊಳಚೆ ನೀರು ಹರಿಸುತ್ತಿದ್ದು, ಜಿಲ್ಲೆಯ ನಾಶಕ್ಕೆ ಮುಂದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸರ್ಕಾರಗಳಿಗೆ ಇಚ್ಛಾಶಕ್ತಿ ಕೊರತೆಯಿದೆ. ಸಮಸ್ಯೆ ಗಂಭೀರವಾಗಿದ್ದರೂ ಸಹ ಜಿಲ್ಲೆಯ ಜನಪ್ರತಿನಿಧಿಗಳು ನೋಡಿಕೊಂಡು ಕುಳಿತಿದ್ದಾರೆ. ಬರದ ಹೆಸರಿನಲ್ಲಿ ರೈತರನ್ನು ಅಡ್ಡ ಹಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಸಾರ್ವಜನಿಕರ ವೇದಿಕೆಗಳ ಮೇಲೆ ಮೊಸಳೆ ಕಣ್ಣೀರು ಸುರಿಸುವ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಟೀಕಿಸಿದರು.

‘ಇನ್ನಾದರೂ ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲೆಯ ಗಂಭೀರ ಸಮಸ್ಯೆಯ ಬಗ್ಗೆ ಅರಿತು ಮೇಕೆದಾಟು ಯೋಜನೆ ಮೂಲಕ ಕುಡಿಯುವ ನೀರು ಹರಿಸಲು ಮುಂದಾಗಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ವೇದಿಕೆ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ರಂಜಿತ್‌ಗೌಡ, ಚಂದ್ರಶೇಖರ್, ಸತೀಶ್‌ರಾಜ್, ವೆಂಕಟೇಶ್‌ಬಾಬು ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು