ಗುರುವಾರ , ಮಾರ್ಚ್ 4, 2021
30 °C

ಲೈಂಗಿಕ ತಡೆ ಕಾನೂನು ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೋಲಾರ: ಮಹಿಳೆಯರು ದುಡಿಯುವ ಪ್ರದೇಶಗಳಲ್ಲಿ ಲೈಂಗಿಕ ತಡೆ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಸೋಮವಾರ ನಗರದ ಜಿಲ್ಲಾಡಳಿತ ಭವನದ ಎದುರು ಧರಣಿ ನಡೆಸಿದರು.

‘ದುಡಿಯುವ ಪ್ರದೇಶಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣಗಳು ಸಂಭವಿಸುತ್ತಿವೆ. ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದ್ದು, ಪೊಲೀಸರಿಗೆ ದೂರು ನೀಡಲು ಹೋದರೆ ಕೆಲಸದಿಂದ ತೆಗೆದು ಹಾಕುವ ಬೆದರಿಕೆಗಳು ಬರುತ್ತಿವೆ’ ಎಂದು ಸಂಘಟನೆಯ ಜಿಲ್ಲಾ ಮುಖ್ಯಸ್ಥೆ ಮುಂಜುಳಾ ಅತಂಕ ವ್ಯಕ್ತಪಡಿಸಿದರು.

‘ಲೈಂಗಿಕ ಕಿರುಕುಳ ಪ್ರಕರಣಗಳು ಮೀಟೂ ಮೂಲಕ ಹೊರಬರುತ್ತಿರುವುದು ದುಡಿಯುವ ಮಹಿಳೆಯರ ಅಸುರಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗಾಗಿ ಎಲ್ಲ ಸಂಸ್ಥೆಗಳು ಸರ್ಕಾರಿ ಮತ್ತು ಖಾಸಗಿ ಕಚೇರಿ, ಕಂಪನಿಗಳಲ್ಲಿ ಲೈಂಗಿಕ ಕಿರುಕುಳ ತಡೆ ಕಾನೂನು ಅನ್ವಯ ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು’ಎಂದು ಒತ್ತಾಯಿಸಿದರು.

‘ಕಾನೂನು ಮತ್ತು ಆಂತರಿಕ ದೂರು ನಿರ್ವಹಣಾ ಸಮಿತಿ ರಚನೆ ಕುರಿತು ಅರಿವು ಮೂಡಿಸಲು ಕರ್ಯಾಗಾರ ನಡಸುವ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಸ್ಥಳೀಯ ದೂರು ನಿರ್ವಹಣಾ ಸಮಿತಿ ರಚಿಸಬೇಕು, ಲೈಂಗಿಕ ಕಿರುಕುಳ ದೂರು ದಾಖಲಿಸಲು ಪ್ರತ್ಯೇಕ ಸಹಾಯವಾಣಿ ಪ್ರಾರಂಭಿಸಬೇಕು. ಸಂಪರ್ಕ ಸಂಖ್ಯೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಚುರಪಡಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರಿ, ಎಸ್‌ಎಫ್‌ಐ ತಾಲ್ಲೂಕು ಘಟಕದ ಅಧ್ಯಕ್ಷೆ ಗಾಯಿತ್ರಿ, ಸದಸ್ಯೆ ಗೀತಾ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.