ಸೋಮವಾರ, ಡಿಸೆಂಬರ್ 9, 2019
21 °C

ಕಲಾಪಕ್ಕೆ ಪರಮೇಶ್ವರ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಸಂಪುಟ ವಿಸ್ತರಣೆ ವಿಳಂಬದಿಂದ ಅಸಮಾಧಾನಗೊಂಡಿರುವ ‘ಕೈ’ ಶಾಸಕರು ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಅಧಿವೇಶನದ ಮೊದಲ ದಿನದ ಕಲಾಪದಲ್ಲಿ ಭಾಗವಹಿಸಿದರು.

ಆದರೆ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಾ. ಸುಧಾಕರ್ ಗೈರಾದರು.

ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸದ ನೆಪದಲ್ಲಿ ಮೊದಲ ದಿನದ ಕಲಾಪಕ್ಕೆ ಗೈರಾಗಿದ್ದಾರೆ. ಆದರೆ, ಪರಮೇಶ್ವರ ಅವರು ಅಧಿವೇಶನಕ್ಕೆ ಗೈರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ ಭಾಗದ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಬಂಡಾಯ ಎದ್ದಿದ್ದ ಸಚಿವ ರಮೇಶ ಜಾರಕಿಹೊಳಿ ಕಲಾಪಗಳಿಂದ ದೂರ ಉಳಿಯಲಿದ್ದಾರೆ ಎಂಬ ವದಂತಿ ಹರಡಿತ್ತು. ಆದರೆ, ಅವರು, ವಿಧಾನಸಭೆಯಲ್ಲಿ ಕೆಲಹೊತ್ತು ಕಾಣಿಸಿಕೊಂಡರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು