ಸೋಮವಾರ, ಸೆಪ್ಟೆಂಬರ್ 21, 2020
25 °C
ತಾಲ್ಲೂಕಿನ ಎಸ್.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಎಸಿಬಿ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಸಭೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಜೋಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಚಿಕ್ಕಬಳ್ಳಾಪುರ: ‘ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ದೊಡ್ಡ ಸವಾಲು. ಅದನ್ನು ನಿಯಂತ್ರಿಸಲು ಇಲಾಖೆಯೊಂದಿಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು’ ಎಂದು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೇಂದ್ರ ವಲಯ ಪೊಲೀಸ್ ವರಿಷ್ಠಾಧಿಕಾರಿ ಎ.ಆರ್.ಬಡಿಗೇರ ಹೇಳಿದರು.

ತಾಲ್ಲೂಕಿನ ಎಸ್.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ಎಸಿಬಿ ವತಿಯಿಂದ ಆಯೋಜಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.

‘ಯಾವುದೇ ಕಚೇರಿಯಲ್ಲಿ ಅಧಿಕಾರಿಗಳು ನಿಗದಿತ ಕಾಲಮಿತಿ ಒಳಗೆ ಕೆಲಸ ಮಾಡಿ ಕೊಡದಿದ್ದರೆ, ಲಂಚ ಕೇಳಿ ಕಚೇರಿಗೆ ಅಲೆದಾಡಿಸಿದರೆ ಜನರು ನೇರವಾಗಿ ಎಸಿಬಿ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಬೇಕು. ಆದರೆ, ಹೆಚ್ಚಿನ ಜನರು ದೂರು ನೀಡಿದರೆ ಎಲ್ಲಿ ತಮ್ಮ ಕೆಲಸಕ್ಕೆ ತೊಂದರೆಯಾಗುತ್ತದೆ ಎಂಬ ಭಯಕ್ಕೆ ಪ್ರಕರಣ ದಾಖಲಿಸುವ ಗೋಜಿಗೆ ಹೋಗುತ್ತಿಲ್ಲ. ಹೀಗಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಕಠಿಣ ಕೆಲಸವಾಗಿದೆ’ ಎಂದು ತಿಳಿಸಿದರು.

ಡಿವೈಎಸ್‍ಪಿ ಎಂ.ಎಲ್.ಪುರುಷೋತ್ತಮ್ ಮಾತನಾಡಿ, ‘ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದು ಸಾಕಷ್ಟು ಅಧಿಕಾರಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳು ಪ್ರಮಾಣಿಕವಾಗಿ ಸೇವೆ ಸಲ್ಲಿಸಬೇಕು. ಸಾರ್ವಜನಿಕರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸದೆ ಕೆಲಸ ಮಾಡಿಕೊಡಬೇಕು’ ಎಂದರು.

ವಿಧವಾ ವೇತನ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಸರ್ಕಾರಿ ಸೇವೆಗೆ ತೊಂದರೆ, ಅಕ್ರಮವಾಗಿ ಜಮೀನು ನೋಂದಣಿ, ಪಡಿತರ ಚೀಟಿಗೆ ಅಲೆದಾಟ ಸೇರಿದಂತೆ ಹತ್ತು ಹಲವು ಅಹವಾಲುಗಳನ್ನು ಸಭೆಯಲ್ಲಿ ಜನರು ಅಧಿಕಾರಿಗಳಿಗೆ ಸಲ್ಲಿಸಿದರು.

ಎಸಿಬಿ ಇನ್‌ಸ್ಪೆಕ್ಟರ್ ಶಿವಮಲ್ಲಯ್ಯ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ.ಸಂಜೀವಪ್ಪ, ಕಂದಾಯ ನಿರೀಕ್ಷಕ ಹನುಮೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬಣ್ಣ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪ್ರದೀಪ್, ಸದಸ್ಯರಾದ ಕೆ.ಎಸ್.ಕೃಷ್ಣಾರೆಡ್ಡಿ, ಕೇತೇನಹಳ್ಳಿ ಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.