ಅಪಘಾತ: ಬೈಕ್‌ ಸವಾರರಿಬ್ಬರ ಸಾವು

7
ಸತ್ತವರಿಬ್ಬರು ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರಿನವರು

ಅಪಘಾತ: ಬೈಕ್‌ ಸವಾರರಿಬ್ಬರ ಸಾವು

Published:
Updated:
Deccan Herald

ಬಾಗಲಕೋಟೆ: ತಾಲ್ಲೂಕಿನ ರಾಂಪುರ ಬಳಿಯ ಬೋಡನಾಯಕನದಿನ್ನಿ ಕ್ರಾಸ್ ಬಳಿ ಮಂಗಳವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಅಪಘಾತದ ನಂತರ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ಗ್ರಾಮದ ಮಂಜುನಾಥ (30) ಹಾಗೂ ಮಲ್ಲಿಕಾರ್ಜುನ (28) ಮೃತಪಟ್ಟವರು. ಸಂಬಂಧದಲ್ಲಿ ಇಬ್ಬರೂ ಮಾವ–ಅಳಿಯ.

ಕಾರ್ಯನಿಮಿತ್ತ ಬಾಗಲಕೋಟೆಗೆ ಬಂದಿದ್ದ ಇಬ್ಬರೂ ಊರಿಗೆ ಮರಳುವಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದ್ದು, ಶವ ರಸ್ತೆ ಪಕ್ಕದ ಪೊದೆಯಲ್ಲಿ ಬಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸುತ್ತಿತ್ತು.  ಲಾರಿ ಚಾಲಕ ರಸ್ತೆ ಬಿಟ್ಟು ಹೊಲಗಳ ಹಾದಿಯಲ್ಲಿ ಲಾರಿ ಓಡಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೃತರ ಶವಗಳನ್ನು ಜಿಲ್ಲಾ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಗಳಿಗೆ ಒಪ್ಪಿಸಿದರು. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !