ದೊಡ್ಡವಲ್ಲಬಿ ಕೆರೆಗೆ ಕಲುಷಿತ ನೀರು

7

ದೊಡ್ಡವಲ್ಲಬಿ ಕೆರೆಗೆ ಕಲುಷಿತ ನೀರು

Published:
Updated:
Deccan Herald

ಕೋಲಾರ: ತಾಲ್ಲೂಕಿನ ನರಸಾಪುರ ಕೆರೆಯಿಂದ ದೊಡ್ಡವಲ್ಲಬಿ ಕೆರೆಗೆ ಕಲುಷಿತ ನೀರು ಹರಿದು ಬರುತ್ತಿದ್ದು, ಈ ನೀರು ಕೆ.ಸಿ ವ್ಯಾಲಿ ಯೋಜನೆಯ ನೀರೆಂದು ಗ್ರಾಮಸ್ಥರು ದೂರಿದ್ದಾರೆ.

ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ಕಾಲುವೆ ಮೂಲಕ ಕಲುಷಿತ ನೀರು ಹರಿದು ಹೋಗುತ್ತಿರುವ ದೃಶ್ಯಾವಳಿಯನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ದೃಶ್ಯಾವಳಿಯು ಮೊಬೈಲ್‌ನಿಂದ ಮೊಬೈಲ್‌ಗೆ ಹರಿದಾಡುತ್ತಿದ್ದು, ನೀರಿನ ಗುಣಮಟ್ಟದ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿದೆ.

‘ದೊಡ್ಡವಲ್ಲಬಿ ಕೆರೆಗೆ ಚರಂಡಿ ನೀರು ಹರಿದು ಬರುತ್ತಿದೆ. ಆ ನೀರು ಕೆ.ಸಿ ವ್ಯಾಲಿ ಯೋಜನೆಯ ನೀರಲ್ಲ. ಆದರೆ, ಕೆಲ ಕಿಡಿಗೇಡಿಗಳು ಕೆ.ಸಿ ವ್ಯಾಲಿ ನೀರು ಎಂದು ವದಂತಿ ಹಬ್ಬಿಸಿದ್ದಾರೆ’ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಬೆಂಗಳೂರಿನ ಬೆಳ್ಳಂದೂರು ಬಳಿ ಇರುವ ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ನೀರು ಸಂಸ್ಕರಣಾ ಘಟಕಕ್ಕೆ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ವಿದ್ಯುತ್‌ ಸರಬರಾಜು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ನೀರು ಸಂಸ್ಕರಣಾ ಕಾರ್ಯ ಸ್ಥಗಿತಗೊಂಡಿದ್ದು, ಘಟಕದಿಂದ ಜಿಲ್ಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ’ ಎಂದು ಹೇಳಿದ್ದಾರೆ.

‘ನರಸಾಪುರ ಕೆರೆಗೆ ಸಂಸ್ಕರಿಸಿದ ನೀರು ಹರಿದು ಬಂದಿದೆ. ಈ ನೀರಿನಲ್ಲಿ ಯಾವುದೇ ಸಮಸ್ಯೆಯಿಲ್ಲ. ಆದರೆ, ಕೆರೆ ನೀರಿಗೆ ಮೊದಲಿನಂತೆ ನರಸಾಪುರ ಗ್ರಾಮದ ಚರಂಡಿ ನೀರು ಸೇರುತ್ತಿದೆ. ಬೆಳ್ಳಂದೂರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆಯಾಗಿ ನಿರಂತರವಾಗಿ ನೀರು ಸರಬರಾಜಾದರೆ ಈ ಸಮಸ್ಯೆ ಪರಿಹಾರವಾಗುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !