54 ಸ್ಥಾನಗಳಿಗೆ ಜ.2ಕ್ಕೆ ಚುನಾವಣೆ

7
ಡಿ.17 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ, ಡಿ.24 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ, ಜನವರಿ 4 ರಂದು ಫಲಿತಾಂಶ ಪ್ರಕಟ

54 ಸ್ಥಾನಗಳಿಗೆ ಜ.2ಕ್ಕೆ ಚುನಾವಣೆ

Published:
Updated:
Deccan Herald

ಚಿಕ್ಕಬಳ್ಳಾಪುರ: ರಾಜ್ಯ ಚುನಾವಣಾ ಆಯೋಗ ಜನವರಿ 2 ರಂದು ಐದು ವರ್ಷಗಳ ಅಧಿಕಾರ ಅವಧಿ ಮುಕ್ತಾಯಗೊಂಡಿರುವ ಜಿಲ್ಲೆಯ ನಾಲ್ಕು ಗ್ರಾಮ ಪಂಚಾಯಿತಿಗಳ 48 ಸದಸ್ಯ ಸ್ಥಾನಗಳಿಗೆ ಚುನಾವಣೆ ಹಾಗೂ ವಿವಿಧ ಕಾರಣಗಳಿಗೆ ತೆರವಾಗಿರುವ ವಿವಿಧ ಗ್ರಾಮ ಪಂಚಾಯಿತಿಗಳ 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಈ ಚುನಾವಣೆಗೆ ಡಿಸೆಂಬರ್ 17 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಡಿ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಡಿ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.24 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ.

ಅವಶ್ಯಕತೆ ಇದ್ದಲ್ಲಿ ಜನವರಿ 2 ರಂದು ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಜ.4 ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಿ, ಫಲಿತಾಂಶ ಘೋಷಣೆಯಾಗಲಿದೆ.

ಎಲ್ಲೆಲ್ಲಿ ಚುನಾವಣೆ?
ಅವಧಿ ಮುಗಿದ ಗ್ರಾಮ ಪಂಚಾಯಿತಿಗಳ ಪೈಕಿ ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ 10 ಸ್ಥಾನಗಳು, ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ 14, ಹೊಸಪೇಟೆ ಗ್ರಾಮ ಪಂಚಾಯಿತಿಯ 17 ಹಾಗೂ ನಾಗಮಂಗಲ ಗ್ರಾಮ ಪಂಚಾಯಿತಿಯ 7 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

6 ಕ್ಷೇತ್ರಗಳಿಗೆ ಉಪ ಚುನಾವಣೆ
ವಿವಿಧ ಕಾರಣಗಳಿಗೆ ಸದಸ್ಯ ಸ್ಥಾನ ತೆರವಾಗಿರುವ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಗ್ರಾಮ ಪಂಚಾಯಿತಿಯ ನಂದಿಗಾನಹಳ್ಳಿ ಕ್ಷೇತ್ರ, ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿ ಕ್ಷೇತ್ರ, ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮ ಪಂಚಾಯಿತಿಯ ಬೂರಗಮಾಕಲಹಳ್ಳಿ ಕ್ಷೇತ್ರ, ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮ ಪಂಚಾಯಿತಿಯ ಜಂಬಿಗೇಮರದಹಳ್ಳಿ, ಸೋಮೇಶ್ವರ ಮತ್ತು ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿಯ ದೇವರಗುಡಿಪಲ್ಲಿ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಮತದಾನಕ್ಕೆ ಇವಿಎಂ ಬಳಕೆ
ಅವಧಿ ಮುಕ್ತಾಯವಾಗಿ ಚುನಾವಣೆ ನಿಗದಿಯಾಗಿರುವ ಭಕ್ತರಹಳ್ಳಿ, ಮಳಮಾಚನಹಳ್ಳಿ, ಹೊಸಪೇಟೆ ಮತ್ತು ನಾಗಮಂಗಲ ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಮತದಾನಕ್ಕೆ ಇದೇ ಮೊದಲ ಬಾರಿಗೆ ಮತಪೆಟ್ಟಿಗೆಗಳ ಬದಲಿಗೆ ಆಯ್ಕೆ ಆಯ್ಕೆಯ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಸಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !