ಬಿಜೆಪಿ ಟಿಕೆಟ್‌ ಆಕಾಂಕ್ಷಿ: ವೀರಯ್ಯ

7

ಬಿಜೆಪಿ ಟಿಕೆಟ್‌ ಆಕಾಂಕ್ಷಿ: ವೀರಯ್ಯ

Published:
Updated:
Deccan Herald

ಕೋಲಾರ: ಲೋಕಸಭಾ ಚುನಾವಣೆಗೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್.ವೀರಯ್ಯ ನಗರದ ಆರ್‌ಎಂಜಿ ಬಡಾವಣೆಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದು, ಈ ಮನೆಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದರು.

‘ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಾನು ಬಿಜೆಪಿಯಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದೇನೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಹಾಗೂ ಆರ್‌ಎಸ್‌ಎಸ್‌ ಮುಖಂಡರು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನನಗೆ ಟಿಕೆಟ್‌ ಸಿಗಲಿದೆ’ ಎಂದು ವೀರಯ್ಯ ವಿಶ್ವಾಸ ವ್ಯಕ್ತಪಡಿಸಿದರು.

‘ಧನುರ್ಮಾಸ ಆರಂಭವಾಗುತ್ತಿರುವ ಕಾರಣ ಮನೆಯಲ್ಲಿ ಪೂಜೆ ಸಲ್ಲಿಸಿ ಗೃಹ ಪ್ರವೇಶಿಸಿದ್ದೇನೆ. ಕ್ಷೇತ್ರದೆಲ್ಲೆಡೆ ಸಂಚರಿಸಿ, ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ತಂಡ ರಚಿಸುತ್ತೇನೆ. ವರಿಷ್ಠರ ಸೂಚನೆ ಮೇರೆಗೆ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುತ್ತಿದ್ದೇನೆ. ಪಕ್ಷ ಸಂಘಟನೆ ಹೆಚ್ಚು ಒತ್ತು ನೀಡುತ್ತೇನೆ’ ಎಂದು ಹೇಳಿದರು.

‘ಕಾಂಗ್ರೆಸ್‌ನ ಹಾಲಿ ಸಂಸದ ಕೆ.ಎಚ್‌.ಮುನಿಯಪ್ಪ ವಿರುದ್ಧ ಈ ಹಿಂದೆ 2 ಬಾರಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದೆ. ಕ್ಷೇತ್ರದಲ್ಲಿ ಈಗ ಮುನಿಯಪ್ಪ ವಿರೋಧಿ ಅಲೆಯಿದ್ದು, ಇದು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವೀರಯ್ಯ ಅವರನ್ನು ಭೇಟಿಯಾಗಿ ಶುಭ ಕೋರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !