ನಿಗದಿಯಂತೆ ಡಿ.22ರಂದೇ ಸಚಿವ ಸಂಪುಟ ವಿಸ್ತರಣೆ: ದಿನೇಶ್‌ ಗುಂಡೂರಾವ್‌

7

ನಿಗದಿಯಂತೆ ಡಿ.22ರಂದೇ ಸಚಿವ ಸಂಪುಟ ವಿಸ್ತರಣೆ: ದಿನೇಶ್‌ ಗುಂಡೂರಾವ್‌

Published:
Updated:

ಮಂಡ್ಯ: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಿಗದಿ ಮಾಡಿರುವಂತೆ ಡಿ.22ರಂದೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಶುಕ್ರವಾರ ಇಲ್ಲಿ ಹೇಳಿದರು.

‘ಯಾವುದೇ ಅಸಮಾಧಾನಗಳಿಗೆ ಅವಕಾಶ ನೀಡದಂತೆ ಸಚಿವ ಸಂಪುಟ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಮುಂದುವರಿಯಲಿದೆ. ಈಗಾಗಲೇ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸಲಾಗುವುದು. ಪಂಚರಾಜ್ಯಗಳ ಚುನಾವಣೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ಬಂದಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !