29ಕ್ಕೆ ಜಿಲ್ಲಾ ವಾಲಿಬಾಲ್ ಪಂದ್ಯಾವಳಿ

7

29ಕ್ಕೆ ಜಿಲ್ಲಾ ವಾಲಿಬಾಲ್ ಪಂದ್ಯಾವಳಿ

Published:
Updated:

ಕೋಲಾರ: ‘ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿಯಲ್ಲಿ ಡಿ.29 ಮತ್ತು 30ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಕೆ.ಆರ್.ಲಕ್ಷ್ಮೀನಾರಾಯಣ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಡಿ.20ರೊಳಗೆ ನೋಂದಾಯಿಸಿಕೊಳ್ಳಬೇಕು. ಭಾಗವಹಿಸುವ ಮೊದಲ 20 ತಂಡಗಳಿಗೆ ವಾಲಿಬಾಲ್ ಹಾಗೂ ನೆಟ್ ವಿತರಿಸಲಾಗುವುದು’ ಎಂದು ಹೇಳಿದರು.

‘ಸಂಸ್ಥೆಯು ಹಲವು ವರ್ಷಗಳ ಬಳಿಕ ಜಿಲ್ಲಾ ಮಟ್ಟದಲ್ಲಿ ಪಂದ್ಯಾವಳಿ ನಡೆಸುತ್ತಿದೆ. ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸಿ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಸಂಸ್ಥೆಯ ಉದ್ದೇಶ. ಜಿಲ್ಲೆಯ ಆಟಗಾರರನ್ನು ಹೊರತುಪಡಿಸಿ ಬೇರೆ ಜಿಲ್ಲೆಯವರಿಗೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶವಿಲ್ಲ’ ಎಂದರು.

‘ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ತಂಡಕ್ಕೆ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಲಾಗುವುದು. ಪ್ರಥಮ ಬಹುಮಾನ ₹ 25 ಸಾವಿರ, ದ್ವಿತೀಯ ಬಹುಮಾನ ₹ 15 ಸಾವಿರ, ಮೂರನೇ ಬಹುಮಾನ ₹ 10 ಸಾವಿರ ಹಾಗೂ ನಾಲ್ಕನೇ ಬಹುಮಾನ ₹ 5 ಸಾವಿರ, ಅತ್ಯುತ್ತಮ ಆಟಗಾರರಿಗೆ ವಿಶೇಷ ಬಹುಮಾನ ನೀಡಲಾಗುವುದು’ ಎಂದು ಸಂಸ್ಥೆ ಅಧ್ಯಕ್ಷ ಪಲ್ಲವಿಮಣಿ ವಿವರಿಸಿದರು.

‘ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಹಾಗೂ ನಂಗಲಿಯ ನೇತಾಜಿ ವಾಲಿಬಾಲ್ ಸಂಘದ ಸಹಕಾರದೊಂದಿಗೆ ಪಂದ್ಯಾವಳಿ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಸಂಸ್ಥೆಯ ಪದಾಧಿಕಾರಿಗಳಾದ ಜಯಪ್ರಕಾಶ್, ಜನಾರ್ದನ್, ನಾರಾಯಣಸ್ವಾಮಿ, ಸುರೇಶ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !