ಪೋಕ್ಸೊ ಪ್ರಕರಣ: 10 ವರ್ಷ ಕಠಿಣ ಜೈಲು

7

ಪೋಕ್ಸೊ ಪ್ರಕರಣ: 10 ವರ್ಷ ಕಠಿಣ ಜೈಲು

Published:
Updated:

ಮಂಗಳೂರು: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಅಪರಾಧಿ ಕಂಕನಾಡಿ ನಿವಾಸಿ ಚಂದ್ರಶೇಖರ್‌ ಅಲಿಯಾಸ್‌ ರಾಜೇಶ್‌ (49) ಎಂಬಾತನಿಗೆ ನಗರದ ಪೋಕ್ಸೊ ವಿಶೇಷ ನ್ಯಾಯಾಲಯ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿದೆ.

2016ರ ಜುಲೈ ತಿಂಗಳಿನಲ್ಲಿ ಕೊಣಾಜೆ ಪೊಲೀಸ್‌ ಠಾಣೆ ವ್ಯಾಪ್ತಿಯ ಅಸೈಗೋಳಿ ಸಮೀಪ ಅಪರಾಧಿಯ ಬಾಡಿಗೆ ಮನೆಯಲ್ಲೇ ಕೃತ್ಯ ನಡೆದಿತ್ತು. ಟಿವಿ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಬಾಲಕಿಯೆ ಮೇಲೆ ಚಂದ್ರಶೇಖರ್‌ ಅಸ್ವಾಭಾವಿಕ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಪ್ರಕರಣದಲ್ಲಿ ಆತ ಅಪರಾಧಿ ಎಂದು ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ (ಪೋಕ್ಸೊ ವಿಶೇಷ) ನ್ಯಾಯಾಲಯ ಶುಕ್ರವಾರ ತೀರ್ಮಾನ ಪ್ರಕಟಿಸಿತ್ತು.

ಶಿಕ್ಷೆ ಪ್ರಮಾಣ ಕುರಿತು ಶನಿವಾರ ಅಪರಾಧಿ ಮತ್ತು ಪ್ರಾಸಿಕ್ಯೂಷನ್‌ ಪರ ವಾದ, ಪ್ರತಿವಾದ ನಡೆಯಿತು. ಆ ಬಳಿಕ ಶಿಕ್ಷೆ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶೆ ಬಿ.ಆರ್‌.ಪಲ್ಲವಿ, ಅಪರಾಧಿಗೆ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿದರು. ದಂಡ ಪಾವತಿಗೆ ತಪ್ಪಿದಲ್ಲಿ ಆರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸುವಂತೆ ಆದೇಶ ಹೊರಡಿಸಿದರು.

ದಂಡದ ಮೊತ್ತದಲ್ಲಿ ₹ 7,500 ಅನ್ನು ಸಂತ್ರಸ್ತೆಗೆ ಪರಿಹಾರವಾಗಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತರ ಪರಿಹಾರ ನಿಧಿಯಿಂದ ಬಾಲಕಿಗೆ ಪರಿಹಾರ ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !