ಜನ್ಮ ದಿನಕ್ಕೆ ಫ್ಲೆಕ್ಸ್‌, ಬ್ಯಾನರ್‌ ಹಾಕದಂತೆ ಸಿಎಂ ಮನವಿ

7

ಜನ್ಮ ದಿನಕ್ಕೆ ಫ್ಲೆಕ್ಸ್‌, ಬ್ಯಾನರ್‌ ಹಾಕದಂತೆ ಸಿಎಂ ಮನವಿ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಜನ್ಮದಿನವಾದ ಭಾನುವಾರ (ಡಿ.16) ಕುಟುಂಬದವರೊಂದಿಗೆ ಸಮಯ ಕಳೆಯಲಿದ್ದಾರೆ.

ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಅವರು ಲಭ್ಯರಿರುವುದಿಲ್ಲ. ಹಿತೈಷಿಗಳು, ಅಭಿಮಾನಿಗಳು ಬೆಳಗಾವಿ ಅಧಿವೇಶನದ ಬಳಿಕ ಅವರನ್ನು ಭೇಟಿ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜನ್ಮದಿನದ ಸಂದರ್ಭ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್‌, ಬ್ಯಾನರ್‌ ಅಳವಡಿಸದಿರುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ‘ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ. ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆಯಲಿ. ಅದೇ ಅತ್ಯುತ್ತಮ ಸಂದೇಶ’ ಎಂದು ಅವರು ವಿನಂತಿಸಿದ್ದಾರೆ.

ಸೋಮವಾರ(ಡಿ.17) ಅವರು ಭೋಪಾಲ್‌ನಲ್ಲಿ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !