ಲೋಕಾಯುಕ್ತದಿಂದ ದೂರು ಸ್ವೀಕಾರ

7

ಲೋಕಾಯುಕ್ತದಿಂದ ದೂರು ಸ್ವೀಕಾರ

Published:
Updated:

ಮಂಗಳೂರು: ಲೋಕಾಯುಕ್ತದ ದಕ್ಷಿಣ ಕನ್ನಡ ಎಸ್‌ಪಿ, ಡಿವೈಎಸ್‌ಪಿ ಮತ್ತು ಇನ್‌ಸ್ಪೆಕ್ಟರ್‌ ಅವರನ್ನು ಒಳಗೊಂಡ ತಂಡ ಇದೇ 19ರಿಂದ 27ರವರೆಗೆ ಜಿಲ್ಲೆಯ ವಿವಿಧೆಡೆ ಭೇಟಿನೀಡಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸಲಿದೆ.

ಡಿಸೆಂಬರ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಮೂಡುಬಿದಿರೆ ವಿಶೇಷ ತಹಶೀಲ್ದಾರ್ ಕಚೇರಿ, ಡಿ.20ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲ್ಲೂಕು ಕಚೇರಿ ಮತ್ತು ಡಿ.21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲ್ಲೂಕು ಕಚೇರಿ, ಡಿ. 22ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಹಶೀಲ್ದಾರ್ ಕಚೇರಿ, ಡಿ.26ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲ್ಲೂೂಕು ಕಚೇರಿ ಹಾಗೂ ಡಿ.27ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲ್ಲೂಕು ಕಚೇರಿಯಲ್ಲಿ ದೂರು, ಅಹವಾಲು ಸ್ವೀಕಾರ ನಡೆಯಲಿದೆ ಎಂದು ಲೋಕಾಯುಕ್ತ ಎಸ್‌ಪಿ ಕಚೇರಿ ಪ್ರಕಟಣೆ ತಿಳಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮಾಡುವುದು ಹಾಗೂ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬಹುದು. ನಮೂನೆ 1 ಮತ್ತು 2 ಅನ್ನು ಭರ್ತಿಮಾಡಿ, ನೋಟರಿ ಪ್ರಮಾಣಪತ್ರದೊಂದಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಎಸ್‌ಪಿ ಕಚೇರಿ ದೂರವಾಣಿ ಸಂಖ್ಯೆ 0824-2429197, ಮೊಬೈಲ್‌ ಸಂಖ್ಯೆ 9448390987, ಡಿವೈಎಸ್‌ಪಿ ಕಚೇರಿ ದೂರವಾಣಿ ಸಂಖ್ಯೆ 0824 – 2453420, ಮೊಬೈಲ್‌ ಸಂಖ್ಯೆ 9886542369 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !