ಮಕ್ಕಳ ಸಂತೆ: ವ್ಯಾಪಾರ ಜೋರು

7

ಮಕ್ಕಳ ಸಂತೆ: ವ್ಯಾಪಾರ ಜೋರು

Published:
Updated:
Deccan Herald

ಕೋಲಾರ: ತಾಲ್ಲೂಕಿನ ಅರಾಭಿಕೊತ್ತನೂರು ಪ್ರೌಢ ಶಾಲೆ ಆವರಣದಲ್ಲಿ ಸೋಮವಾರ ನಡೆದ ಮಕ್ಕಳ ಸಂತೆಯಲ್ಲಿ ವ್ಯಾಪಾರ ಜೋರಾಗಿಯೆ ನಡೆಯಿತು.

ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಬೇಲ್‍ಪುರಿ, ಬೋಂಡಾ, ಬಜ್ಜಿ, ಕಾಫಿ, ಟೀ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.

ಸಂತೆಗೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ಮಾತನಾಡಿ, ‘ವ್ಯಾಪಾರ ವಹಿವಾಟಿನಿಂದ ಮಕ್ಕಳಲ್ಲಿ ನಿತ್ಯ ಜೀವನದ ಅನುಭವವಾಗುತ್ತದೆ. ತಂದೆ, ತಾಯಿ ಅಂಗಡಿಗೆಹೋಗಿ ತರಕಾರಿ ತರಲು ತಿಳಿಸಿದರೆ ಯಾವ ರೀತಿ ವ್ಯಾಪಾರ ಮಾಡಬೇಕೆಂಬ ಅರಿವು ಸಿಕ್ಕಂತಾಗಿದೆ’ ಎಂದರು.

‘ಕೇವಲ ಪಾಠ, ಕ್ರೀಡೆಗೆ ಸೀಮಿತವಾಗದೇ ಮಕ್ಕಳಲ್ಲಿ ಸಾಮಾಜಿಕ ಬದುಕಿನ ಪರಿಚಯ ಮಾಡಿಕೊಡುವ ಪ್ರಯತ್ನ ಶಾಲಾ ಹಂತದಲ್ಲಿ ನಡೆಯಬೇಕು’ ಎಂದು ಹೇಳಿದರು.

ಅತ್ಯುತ್ತಮ ಮಳಿಗೆ ಪ್ರಶಸ್ತಿಯಲ್ಲಿ 8ನೇ ತರಗತಿಯ ಮೋನಿಕಾ ಪ್ರಥಮ, 9ನೇ ತರಗತಿಯ ಮಾರುತಿ ದ್ವಿತೀಯ ಹಾಗೂ 10ನೇ ತರಗತಿಯ ಅಶ್ವಿನ್ ತೃತೀಯ ಸ್ಥಾನ ಪಡೆದುಕೊಂಡರು.

ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಸತೀಶ್ ಎಸ್.ನ್ಯಾಮತಿ, ಶ್ವೇತಾ,ಸುಗುಣಾ, ಲೀಲಾ, ಫರೀದಾ, ವೆಂಕಟರೆಡ್ಡಿ, ನಾರಾಯಣಸ್ವಾಮಿ, ಸಿ.ಎಲ್.ಶ್ರೀನಿವಾಸಲು, ಡಿ.ಚಂದ್ರಶೇಖರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !