ಆಳುವ ಪಕ್ಷದಿಂದ ನ್ಯಾಯ ನಿರಾಕರಣೆ : ಹಿರಿಯ ವಕೀಲೆ ಇಂದಿರಾ ಜೈಸಿಂಗ್‌

7

ಆಳುವ ಪಕ್ಷದಿಂದ ನ್ಯಾಯ ನಿರಾಕರಣೆ : ಹಿರಿಯ ವಕೀಲೆ ಇಂದಿರಾ ಜೈಸಿಂಗ್‌

Published:
Updated:
Deccan Herald

ಮಂಗಳೂರು: ದೇಗುಲ ಪ್ರವೇಶದ ವಿಚಾರದಲ್ಲಿ ನ್ಯಾಯಾಂಗವು ಮಹಿಳೆಯರಿಗೆ ನೀಡಿರುವ ನ್ಯಾಯವನ್ನು ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಳುವ ಪಕ್ಷವೇ ನಿರಾಕರಿಸುತ್ತಿದೆ ಎಂದು ಸುಪ್ರೀಂಕೋರ್ಟ್‌ನ ಹಿರಿಯ ವಕೀಲೆ, ಮಾಜಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಇಂದಿರಾ ಜೈಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸೋಮವಾರ ನಡೆದ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಭಾರತದ ನ್ಯಾಯ ವ್ಯವಸ್ಥೆಯಲ್ಲಿ ಲಿಂಗ ಸಮಾನತೆ’ ಕುರಿತು ಅವರು ಮಾತನಾಡಿದರು.

ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಆದರೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಅಧ್ಯಕ್ಷರೇ ತೀರ್ಪು ಜಾರಿಯ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದು ನ್ಯಾಯಾಂಗದಿಂದ ಮಹಿಳೆಯರಿಗೆ ಪ್ರಾಪ್ತವಾಗಿರುವ ನ್ಯಾಯವು ಅವರನ್ನು ತಲುಪದಂತೆ ಮಾಡುವ ಪ್ರಯತ್ನವಾಗಿದೆ ಎಂದು ದೂರಿದರು.

ತ್ರಿವಳಿ ತಲಾಖ್‌ ವಿಚಾರದಲ್ಲಿ ತಾನು ಎಲ್ಲ ಮುಸ್ಲಿಂ ಮಹಿಳೆಯರ ರಕ್ಷಕ ಎಂದು ಬಿಂಬಿಸಿಕೊಳ್ಳುವ ಕೇಂದ್ರ ಸರ್ಕಾರ, ಮಹಿಳೆಯರ ದೇವಾಲಯ ಪ್ರವೇಶದ ವಿಚಾರದಲ್ಲಿ ಇಬ್ಬಗೆಯ ನಿಲುವು ಪ್ರದರ್ಶಿಸುತ್ತಿದೆ. ಆಡಳಿತ ಪಕ್ಷದಲ್ಲೇ ಇಂತಹ ಧೋರಣೆ ಇದ್ದರೆ ಯಾರಿಂದ ನ್ಯಾಯ ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !