ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ 19ಕ್ಕೆ

7

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ 19ಕ್ಕೆ

Published:
Updated:
Deccan Herald

ಬಾಗಲಕೋಟೆ: ‘ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ಅವ್ಯವಹಾರ ನಡೆಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಅದನ್ನು ಖಂಡಿಸಿ ಡಿಸೆಂಬರ್ 19 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ತಿಳಿಸಿದರು.

ಸುಪ್ರೀಂಕೋರ್ಟ್‌ನ ಈ ತೀರ್ಪು ಎಐಸಿಸಿ ಅಧ್ಯಕ್ಷರಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ. ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಆರೋಪ ಮುಂದುವರೆಸಿದ್ದಾರೆ ಎಂದರು.

‘ರಾಹುಲ್‌ ಗಾಂಧಿ ಅವರ ಅಜ್ಜನಿಂದ ಹಿಡಿದು ಎಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ. ರಾಹುಲ್‌ ತಾಯಿ ಸೋನಿಯಾಗಾಂಧಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಪಡೆದು ಓಡಾಡುತ್ತಿದ್ದಾರೆ. ಅಂತಹವರು ಪ್ರಧಾನಿ ಮೇಲೆ ಆರೋಪ ಮಾಡುತ್ತಿದ್ದು,  ಬೇಷರತ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಭ್ರಷ್ಟಾಚಾರದಲ್ಲಿ ತಾವೇ ಭಾಗಿಯಾಗಿ ಪ್ರಧಾನಿ ರಫೆಲ್‌ ಖರೀದಿಯಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ ಎಂದು ಹೇಳುವ ಹುಚ್ಚರನ್ನು ಕಂಡಿಲ್ಲ. ಪೂರ್ತಿ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇಂಥವರಿಗೆ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದರು.

ಬಿಜೆಪಿ ಮುಖಂಡರಾದ ರಾಜು ರೇವಣಕರ್, ರಾಜು ನಾಯ್ಕರ್, ಜಯಂತ ಕುರಂದವಾಡ, ಜ್ಯೋತಿ ಭಜಂತ್ರಿ ಹಾಜರಿದ್ದರು.

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !