ಗುರುವಾರ , ಫೆಬ್ರವರಿ 20, 2020
29 °C

ಮೀಸಲಾತಿ ವಿಸ್ತರಣೆಗೆ ಅಂದೋಲನ ರೂಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಬಲಿಜ ಜನಾಂಗಕ್ಕೆ ಕಲ್ಪಿಸಲಾಗಿರುವ 2ಎ ಶೈಕ್ಷಣಿಕ ಮೀಸಲಾತಿಯನ್ನು ಎಲ್ಲ ಕ್ಷೇತ್ರಗಳಿಗೆ ವಿಸ್ತರಣೆ ಮಾಡಲು ಅಂದೋಲನ ರೂಪಿಸಬೇಕಾದ ಅಗತ್ಯವಿದೆ' ಎಂದು ಬಲಿಜಿಗರ ಸಂಘದ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಕೆ.ವಿ.ಸುರೇಶ್‍ಕುಮಾರ್ ಅಭಿಪ್ರಾಯಪಟ್ಟರು.

‘ರಾಜ್ಯ ಪ್ರದೇಶ ಬಲಿಜ ಸಂಘದಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಹಿಂದೆ ಹೋರಾಟ ನಡೆಸಿದ ಹಿನ್ನಲೆಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಮಾತ್ರ 2ಎ ಮೀಸಲಾತಿ ದೊರೆಯಿತು. ಈಗ ಅದನ್ನು ಎಲ್ಲಾ ಕ್ಷೇತ್ರಕ್ಕೆ ವಿಸ್ತರಿಸಬೇಕಾಗಿದ್ದು, ಅಂದೋಲನೆಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು’ ಎಂದು ಕೋರಿದರು.

‘ಪ್ರದೇಶ ಬಲಿಜ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪೆರಿಕಲ್‍ಸುಂದರ್ ಮಾತನಾಡಿ, ಜನಾಂಗವನ್ನು ಸಂಘಟಿಸುವ ಉದ್ದೇಶದಿಂದ ಸದಸ್ಯತ್ವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ' ಎಂದು ತಿಳಿಸಿದರು.

'ಬೆಂಗಳೂರಿನಲ್ಲಿ ಸಮುದಾಯದ ವಿದ್ಯಾರ್ಥಿನಿಲಯವನ್ನು ₹65 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದ್ದು, 142 ಸೀಟುಗಳನ್ನು 500ಕ್ಕೆ ಏರಿಸುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.

‘ಸರ್ಕಾರ ನೀಡಿರುವ 2 ಎಕರೆ ಜಮೀನಿನಲ್ಲಿ ವಸತಿ ಶಾಲೆ ಮತ್ತು ಕಲ್ಯಾಣ ಮಂಟಪ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಸಂಘದಲ್ಲಿ 1 ಲಕ್ಷ ಸದಸ್ಯತ್ವ ಸಂಗ್ರಹದ ಗುರಿ ಹೊಂದಲಾಗಿದ್ದು ಜನಾಂಗ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಸಂಘಟಿತರಾಗಬೇಕು’ ಎಂದು ಮನವಿ ಮಾಡಿದರು.

ಕರ್ನಾಟಕ ಪ್ರದೇಶ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್, ಆನೇಕಲ್ ತಿಮ್ಮಯ್ಯ ಚಾರಿಟಬಲ್ ಟ್ರಸ್ಟ್‍ನ ಖಜಾಂಚಿ ಡಾ.ಗೋವಿಂದಸ್ವಾಮಿ, ಟ್ರಸ್ಟಿ ವಿಜಯಪುರವೆಂಕಟೇಶ್, ಕೈವಾರ ಮಠದ ಸಂಯೋಜಕ ಬಾಲಕೃಷ್ಣಭಾಗವತರ್, ಜಿಲ್ಲಾ ಗೌರವಾಧ್ಯಕ್ಷ ಸಾ.ಮ.ರಂಗಪ್ಪ, ನಿವೃತ್ತ ಡಿವೈಎಸ್ಪಿ ವೆಂಕಟಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು