ಶುಕ್ರವಾರ, ಏಪ್ರಿಲ್ 10, 2020
19 °C
ಖಾತೆಗಳ ಪುನರ್‌ ಹಂಚಿಕೆ ಕುರಿತು ವರಿಷ್ಠರ ಬಳಿ ಮಾತನಾಡಿಲ್ಲ ಎಂದು ಸ್ಪಷ್ಟನೆ

ಖಾತೆ ಹಂಚಿಕೆ: ಪಕ್ಷದ ತೀರ್ಮಾನ ಅಂತಿಮ ಎಂದ ಸಚಿವ ಯು.ಟಿ.ಖಾದರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಖಾತೆಗಳ ಪುನರ್‌ ಹಂಚಿಕೆ ಕುರಿತು ಪಕ್ಷದ ವರಿಷ್ಠರು ಈವರೆಗೆ ನನ್ನೊಂದಿಗೆ ಮಾತನಾಡಿಲ್ಲ. ಈ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ’ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್‌ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನ ಜೊತೆ ವರಿಷ್ಠರು ಮಾತನಾಡಿದ್ದಾರೆ ಎಂಬುದರಲ್ಲಿ ಸತ್ಯವಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಸೂಚನೆಯಂತೆ ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.

ಯಾವ ಖಾತೆಯನ್ನು ಉಳಿಸಿಕೊಳ್ಳಬೇಕು ಎಂಬುದರ ಕುರಿತು ಯೋಚನೆಯನ್ನೇ ಮಾಡಿಲ್ಲ. ಒಂದು ಖಾತೆ ದೊಡ್ಡದು, ಮತ್ತೊಂದು ಖಾತೆ ಸಣ್ಣದು ಎಂದು ಹೇಳಲು ಸಾಧ್ಯವಿಲ್ಲ. ಕೆಲಸ ಮಾಡುವ ಆಸಕ್ತಿ ಇರುವವರಿಗೆ ಎಲ್ಲ ಖಾತೆಗಳೂ ಒಂದೇ ಆಗಿರುತ್ತವೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು