ನೀರು ಸರಬರಾಜು ಸಿಬ್ಬಂದಿ ಕರ್ತವ್ಯಲೋಪ; ಕ್ರಮಕ್ಕೆ ಆಗ್ರಹ

ಭಾನುವಾರ, ಮೇ 26, 2019
27 °C
ಚಿಂತಾಮಣಿ: ಕನ್ನಡ ಜಾಗೃತಿ ವೇದಿಕೆಯ ಮುಖಂಡರಿಂದ ಪೌರಾಯುಕ್ತರಿಗೆ ಮನವಿ

ನೀರು ಸರಬರಾಜು ಸಿಬ್ಬಂದಿ ಕರ್ತವ್ಯಲೋಪ; ಕ್ರಮಕ್ಕೆ ಆಗ್ರಹ

Published:
Updated:
Prajavani

ಚಿಂತಾಮಣಿ: ನಗರಸಭೆ ವ್ಯಾಪ್ತಿಯ ಗಾಂಧಿನಗರ ಪ್ರದೇಶದಲ್ಲಿ ನೀರು ಸರಬರಾಜು ಮಾಡುವ ನಗರಸಭೆ ಸಿಬ್ಬಂದಿ ಕರ್ತವ್ಯಲೋಪ ಎಸಗುತ್ತಿದ್ದಾರೆ. ನಾಗರಿಕರಿಂದ ಹಣ ಪಡೆಯುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ತಾಲ್ಲೂಕು ಘಟಕದ ಮುಖಂಡರು ಗುರುವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಗಾಂಧಿನಗರದ ಪ್ರದೇಶದಲ್ಲಿ ನೀರು ಬಿಡುವ ಸಿಬ್ಬಂದಿ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ನೀರು ಬಿಡುವುದಿಲ್ಲ. ಕೆಲವು ಕಡೆ ಹಣ ಪಡೆದು ಹೆಚ್ಚು ನೀರು ಪೂರೈಸುತ್ತಿದ್ದಾರೆ. ಯಾರಾದರೂ ಪ್ರಶ್ನಿಸಿದರೆ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಹಿರಿಯರು ಎಂಬುದನ್ನು ಗಮನಿಸದೆ ಬಾಯಿಗೆ ಬಂದಂತೆ ನಿಂದಿಸುತ್ತಿದ್ದಾರೆ. ಆದರೆ ಹಣ ನೀಡುವವರಿಗೆ ಹೆಚ್ಚಿನ ನೀರು ಬಿಡುತ್ತಿದ್ದಾರೆ ಎಂದು ದೂರಿದರು.

ಕೆಲವು ಪ್ರಭಾವಿ ವ್ಯಕ್ತಿಗಳ ಮನೆಗಳ ಸಂಪರ್ಕ ಕೊಳವೆಗಳಿಗೆ ವಿದ್ಯುತ್ ಮೋಟರುಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದರಿಂದ ಬೇರೆಯವರ ಮನೆಗಳಿಗೆ ನೀರು ಬರುವುದಿಲ್ಲ. ನಗರಸಭೆ ನೀರು ಸರಬರಾಜು ವಿಭಾಗದ ಕಿರಿಯ ಎಂಜನಿಯರ್ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಈಗಲೂ ಕ್ರಮಕೈಗೊಳ್ಳದಿದ್ದರೆ ನಗರಸಭೆಗೆ ಮುತ್ತಿಗೆ ಹಾಕುತ್ತೇವೆ ಎಂದು ಮುಖಂಡರು ಮನವಿಯಲ್ಲಿ ಎಚ್ಚರಿಸಿದ್ದಾರೆ.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ನಾಗರಾಜು, ಉಪಾಧ್ಯಕ್ಷ ಅಬ್ದುಲ್ ಖಯ್ಯೂಮ್, ಆಟೊ ಘಟಕದ ಅಧ್ಯಕ್ಷ ಜಿ.ಎನ್.ಮಂಜುನಾಥ್ ಇದ್ದರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !