ಫೆ.3ಕ್ಕೆ ಸಾಹಿತ್ಯ ಸಮ್ಮೇಳನ

7

ಫೆ.3ಕ್ಕೆ ಸಾಹಿತ್ಯ ಸಮ್ಮೇಳನ

Published:
Updated:

ಕೋಲಾರ: ‘ಸಂಘಟನೆ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.3ರಂದು ಸಿರಿಗನ್ನಡ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಜೆ.ಮೌನಿ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಹಕಾರ ನೀಡಬೇಕು. ನಗರದ ಹೊರವಲಯದಲ್ಲಿ ಸುಮಾರು ₹ 50 ಲಕ್ಷ ವೆಚ್ಚದಲ್ಲಿ ಕನ್ನಡ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.

‘ಸಾಹಿತಿ ದೊಡ್ಡರಂಗೇಗೌಡ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮ, ಧ್ವಜಾರೋಹಣ, ಉದ್ಘಾಟನಾ ಸಮಾರಂಭ ಮತ್ತು ವಿಚಾರಗೋಷ್ಠಿ ಆಯೋಜಿಸಲಾಗಿದೆ. ಸುಮಾರು 500 ಪುಟಗಳ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಕನ್ನಡ ನಾಡು, ನುಡಿಗೆ ಶ್ರಮಿಸುತ್ತಿರುವ ಸಾಹಿತಿಗಳು, ಸಂಘಟನೆ ಸದಸ್ಯರು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಲಾಗುವುದು’ ಎಂದು ವಿವರಿಸಿದರು.

‘ಸಮ್ಮೇಳನಕ್ಕೆ ಪರಿಷತ್‌ನಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಕನ್ನಡ ಭಾಷೆಯ ಅಭಿವೃದ್ಧಿಗೆ ಸಮ್ಮೇಳನ ಸಹಕಾರಿ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್ ಅಭಿಪ್ರಾಯಪಟ್ಟರು.

ರೋಟರಿ ಸಂಸ್ಥೆ ಅಧ್ಯಕ್ಷ ಶಂಕರೇಗೌಡ, ವೇದಿಕೆ ಪದಾಧಿಕಾರಿಗಳಾದ ವೆಂಕಟರಮಣಪ್ಪ, ಡಿ.ಕೃಷ್ಣಪ್ಪ, ಸೋಮಶೇಖರ್, ಸುಬ್ಬರಾಮಯ್ಯ, ಮುನಿರಾಜು, ಕವಿ ಶರಣಪ್ಪ ಗಬ್ಬೂರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !