ಗಮನ ಸೆಳೆದ ರಂಗೋಲಿ ಸ್ಪರ್ಧೆ

6

ಗಮನ ಸೆಳೆದ ರಂಗೋಲಿ ಸ್ಪರ್ಧೆ

Published:
Updated:
Prajavani

ಕೋಲಾರ: ಮಹಿಳಾ ಸಂಸ್ಕೃತಿ ಉತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜನವಾದಿ ಮಹಿಳಾ ಸಂಘಟನೆ ಸಹಯೋಗದಲ್ಲಿ ಇಲ್ಲಿನ ಟಿ.ಚನ್ನಯ್ಯ ರಂಗಮಂದಿರ ಆವರಣದಲ್ಲಿ ಬುಧವಾರ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.

ಸಂಗೀತ ಕಲಾವಿದೆ ವೇದವತಿ ಸ್ಪರ್ಧೆ ಉದ್ಘಾಟಿಸಿದರು. ತಾಲ್ಲೂಕಿನ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಪುರುಷರು ಚಿತ್ತಾಕರ್ಷಕ ರಂಗೋಲಿ ಬಿಡಿಸಿದರು. ಬಣ್ಣ ಬಣ್ಣದ ರಂಗೋಲಿಗಳು ನೋಡುಗರ ಗಮನ ಸೆಳೆದವು. ಸ್ಪರ್ಧೆಯಲ್ಲಿ ಅಂತಿಮವಾಗಿ ವಸಂತಾ, ಶಿಲ್ಪಾ ಹಾಗೂ ಶೈಲಜಾ ಅವರು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು.

‘ರಂಗೋಲಿ ಸ್ಪರ್ಧೆಯಲ್ಲಿ 24 ಮಂದಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಗುರುವಾರ (ಜ.3) ನಡೆಯಲಿರುವ ಮಹಿಳಾ ಸಂಸ್ಕೃತಿ ಉತ್ಸವದಲ್ಲಿ ಬಹುಮಾನ ವಿತರಿಸಲಾಗುತ್ತದೆ. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಸಮಾಧಾನಕರ ಬಹುಮಾನ ನೀಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !