ಸಿದ್ದರಾಮಯ್ಯ ಜೊತೆ ಸಚಿವರ ದಂಡು

7
ಬಾದಾಮಿಗೆ ಸಾ.ರಾ.ಮಹೇಶ್, ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಭೇಟಿ

ಸಿದ್ದರಾಮಯ್ಯ ಜೊತೆ ಸಚಿವರ ದಂಡು

Published:
Updated:

ಬಾಗಲಕೋಟೆ: ಬಾದಾಮಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆದಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಜನವರಿ 4 ಹಾಗೂ 5ರಂದು ಬಾದಾಮಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ನಿಟ್ಟಿನಲ್ಲಿ ತಮ್ಮೊಂದಿಗೆ ಸಚಿವರ ದಂಡನ್ನು ಕ್ಷೇತ್ರಕ್ಕೆ ಕರೆತರುತ್ತಿದ್ದಾರೆ.

ಸಿದ್ದರಾಮಯ್ಯ ಅವರೊಂದಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಬರಲಿದ್ದಾರೆ.

ಬಾದಾಮಿಯಲ್ಲಿ ವಿಶ್ವಪ್ರಸಿದ್ಧ ಪ್ರವಾಸಿ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಧ್ಯಾಸಾಧ್ಯತೆಗಳು ಹಾಗೂ ಅಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯ ಬಗ್ಗೆ ಸಾ.ರಾ.ಮಹೇಶ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಜನವರಿ 5ರಂದು ಮಹಾಕೂಟಕ್ಕೆ ಹಾಗೂ ಬನಶಂಕರಿ ದೇವಸ್ಥಾನಕ್ಕೆ ಮಹೇಶ್ ಭೇಟಿ ನೀಡಲಿದ್ದಾರೆ.

ಪ್ರಗತಿ ಪರಿಶೀಲನೆ: ಜನವರಿ 4 ರಂದು ಬೆಳಿಗ್ಗೆ 11.30ಕ್ಕೆ ಬಾದಾಮಿ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 3 ಗಂಟೆಗೆ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5 ಕ್ಕೆ ಆಹಾರ ಸಚಿವ ಜಮೀರ್‌ ಅಹಮದ್ ಹಾಗೂ ಸಂಜೆ 6 ಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ಕ್ಷೇತ್ರದಲ್ಲಿನ ಕಾಮಗಾರಿಗಳ ಪರಿಶೀಲನೆ ನಡೆಸುವರು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !