ಸಮನ್ವಯ ಮೂಡಲು ಕ್ರೀಡಾಕೂಟ ಸಹಕಾರಿ

7
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

ಸಮನ್ವಯ ಮೂಡಲು ಕ್ರೀಡಾಕೂಟ ಸಹಕಾರಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಸರ್ಕಾರಿ ನೌಕರರಿಗೆ ಏರ್ಪಡಿಸುವ ಕ್ರೀಡಾಕೂಟಗಳು ನೌಕರರ ದೈಹಿಕ, ಮಾನಸಿಕ ಸದೃಢತೆಗೆ ಉಪಯುಕ್ತ ಮಾತ್ರವಲ್ಲದೆ ವಿವಿಧ ಇಲಾಖೆಗಳ ನಡುವೆ ಸಮನ್ವಯ, ಸಹಕಾರ ಮನೋಭಾವ ಸೃಷ್ಟಿಸುತ್ತವೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರಿಗೆ, ಕುಟುಂಬದವರಿಗೆ ಎರಡು ದಿನಗಳ ಕ್ರೀಡಾಕೂಟ ಆಯೋಜನೆ ಮಾಡಿದ್ದೇವೆ. ನಿಮ್ಮ ಒಳಗಿನ ಪ್ರತಿಭೆ ಹೊರ ತೆಗೆಯಲು ಇದು ವೇದಿಕೆಯಾಗಲಿದೆ ಎಂಬ ವಿಶ್ವಾಸವಿದೆ. ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸೋಲು, ಗೆಲುವಿಗಿಂತಲೂ ಸ್ಪರ್ಧಾ ಮನೋಭಾವದಿಂದ ಭಾಗವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್‌ ಹೆಗಡೆ, ಮುಖ್ಯ ಲೆಕ್ಕಾಧಿಕಾರಿ ಎಂ.ಎಚ್.ನಾಗೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ.ರುದ್ರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ರೆಡ್ಡಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಶಿವಪುತ್ರಪ್ಪ ಭೂತಲ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !