ತಂತ್ರಗಳನ್ನು ಬಳಸಿ ಬೋಧಿಸಿ

7
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಸಿಇಒ ನಲಿನ್ ಅತುಲ್ ಹೇಳಿಕೆ

ತಂತ್ರಗಳನ್ನು ಬಳಸಿ ಬೋಧಿಸಿ

Published:
Updated:
Prajavani

ರಾಯಚೂರು: ಮಕ್ಕಳಲ್ಲಿ ಇರುವ ಬುದ್ಧಿಯನ್ನು ಚುರುಕುಗೊಳಿಸಲು ಸಣ್ಣ– ಸಣ್ಣ ತಂತ್ರಗಳನ್ನು ಬಳಸಿ ಶಿಕ್ಷಕರು ಗುಣಮಟ್ಟದ ಬೋಧನೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್ ಹೇಳಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ವನಿತಾ ವಾಸವಿ ಸೇವಾ ಸಮಿತಿ ಹಾಗೂ ಇತರ ಸಂಘಟನೆಗಳಿಂದ ಶುಕ್ರವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರದಲ್ಲಿ ಗಣಿತ, ವಿಜ್ಞಾನ, ಇಂಗ್ಲಿಷ್‌ ವರ್ಕ್‌ ಬುಕ್ ಮತ್ತು ಪಾಸಿಂಗ್ ಪ್ಯಾಕೇಜ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಆದರೂ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅವಶ್ಯಕತೆಯಿದೆ. ಮಕ್ಕಳ ಆಸಕ್ತಿಯನ್ನು ಹೆಚ್ಚಿಸುವ ಸಲುವಾಗಿ ಶಿಕ್ಷಕರು ತಂತ್ರಗಳನ್ನು ಬಳಸಿ ಪಾಠ ಮಾಡಬೇಕು ಎಂದರು.

ಜಿಲ್ಲೆಯ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಯ ಗಮನಕ್ಕಿದ್ದು, ಎಚ್‌ಕೆಆರ್‌ಡಿ ಅನುದಾನದಲ್ಲಿ ನೀಗಿಸಲು ಪ್ರಯತ್ನಿಸಲಾಗುವುದು. ಏನಾದರೂ ಸಮಸ್ಯೆಯಿದ್ದರೂ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರು ಮಾತನಾಡಿ, ಮುಖ್ಯ ಶಿಕ್ಷಕರು ಶಾಲೆಯ ಜವಾಬ್ದಾರಿ ವಹಿಸಿಕೊಂಡು ಕೆಲಸ ನಿರ್ವಹಿಸಿ, ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಕಲಿಕಾ ಯೋಜನೆ ರೂಪಿಸಿ ಬೋಧನೆ ಮಾಡಬೇಕು ಎಂದು ಹೇಳಿದರು.

ಶಾಲೆಯ ಕುಂದುಕೊರತೆಗಳು ನೋಡಿ ಸುಮ್ಮನಿರದೆ ಬಗೆಹರಿಸುವ ಪ್ರಯತ್ನ ಮುಖ್ಯ ಶಿಕ್ಷಕರ ಮಾಡಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ನಂದೀಶ ಶೆಟ್ಟರ್ ಉಪನ್ಯಾಸ ನೀಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಅಗತ್ಯವಾದ ಮಾರ್ಗದರ್ಶನ ನೀಡಿದರು.

ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ದೊಡ್ಡಮನಿ, ಚಂದ್ರಶೇಖರ ಭಂಡಾರಿ, ಗುಡಿಹಾಳ, ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಸೈಯದ್ ಹಫೀಜುಲ್ಲಾ, ಶೃತಿ ಸಂಸ್ಕೃತಿ ಸಂಸ್ಥೆಯ ಅಂಬಣ್ಣ ಆರೋಲಿ, ವನಿತಾ ವಾಸವಿ ಕ್ಲಬ್‌ ಅಧ್ಯಕ್ಷೆ ಎಂ.ಆರ್.ಅಂಜಲಿ, ವಿಮುಕ್ತಿ ಚಾರಿಟೇಬಲ್ ಟ್ರಸ್ಟ್‌ ಸತೀಶ ಫಾದರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !