ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

7

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Published:
Updated:

ಬೆಂಗಳೂರು: ಮೌಂಟ್ ಕಾರ್ಮೆಲ್ ಕಾಲೇಜಿನ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಶೈನಿ (19) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.

ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಕಾಲೇಜಿನ ಸಮೀಪದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಆಕೆಯನ್ನು, ಇಬ್ಬರು ವಿದ್ಯಾರ್ಥಿನಿಯರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದ ಶೈನಿ, ಸ್ವಲ್ಪ ಸಮಯದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ‘ನಿದ್ರೆ ಮಾತ್ರೆಗಳನ್ನು ನುಂಗಿದ್ದಾಳೆ’ ಎಂದು ಹೇಳಿದ್ದಾರೆ. ‘ಮಗಳು ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದಳು. ಅದೇ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಶೈನಿ ತಂದೆ ಬಾಬು ರಾಜೇಂದ್ರ ಹೇಳಿಕೆ ಕೊಟ್ಟಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಿದ ವಿದ್ಯಾರ್ಥಿನಿಯರ ಮೊಬೈಲ್‌ಗಳು ಸ್ವಿಚ್ಡ್ ಆಫ್ ಆಗಿವೆ ಎಂದು ಹೈಗ್ರೌಂಡ್ಸ್ ಪೊಲೀಸರು ಹೇಳಿದ್ದಾರೆ.

ಖಾಸಗಿ ಕಂಪನಿ ಉದ್ಯೋಗಿಯಾದ ಬಾಬು ರಾಜೇಂದ್ರ, ಪತ್ನಿ ಹಾಗೂ ಮಗಳು ಶೈನಿ ಜತೆ ಕಾಟನ್‌ಪೇಟೆಯಲ್ಲಿ ನೆಲೆಸಿದ್ದರು. ಎಂದಿನಂತೆ ಬೆಳಿಗ್ಗೆಯೇ ಕಾಲೇಜಿಗೆ ಬಂದಿರುವ ಆಕೆ, ತರಗತಿಗಳಿಗೂ ಹಾಜರಾಗಿದ್ದಳು. ಎಲ್ಲಿ ನಿದ್ರೆ ಮಾತ್ರೆ ನುಂಗಿದಳು? ಬಸ್ ನಿಲ್ದಾಣದವರೆಗೆ ಯಾರ ಜತೆಗೆ ಬಂದಳು ಎಂಬುದು ಗೊತ್ತಾಗಿಲ್ಲ. ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !