ಜ.8, 9ರಂದು ಸಾರಿಗೆ ನೌಕರರ ಮುಷ್ಕರ

7

ಜ.8, 9ರಂದು ಸಾರಿಗೆ ನೌಕರರ ಮುಷ್ಕರ

Published:
Updated:

ಬೆಂಗಳೂರು: ಎಐಟಿಯುಸಿ ಮತ್ತು ಸಿಐಟಿಯು ಸೇರಿದ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ‌ಜ.8, ಮತ್ತು 9ರಂದು ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮುಷ್ಕರ ನಡೆಸಲಿವೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ಸದಸ್ಯರು ಮುಷ್ಕರ ನಡೆಸಲು ನಿರ್ಧಾರ ತೆಗೆದುಕೊಂಡರು. ಈ ಸಭೆಯಲ್ಲಿ 12 ಮುಖ್ಯ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.‌

ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಮತ್ತು‌ ಎನ್‌ಇಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಎರಡು ದಿನ ನಡೆಯುವ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕಾರ್ಮಿಕ ಸಂಘಟನೆಗಳು ಮನವಿ ಸಲ್ಲಿಸಿವೆ.

ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌.ಮಂಜುನಾಥ್, ‘ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಡಾ.ಎಂ.ಎಸ್‌.ಸ್ವಾಮಿನಾಥನ್‌ ವರದಿ ಜಾರಿ ಹಾಗೂ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಈ ಮುಷ್ಕರ ನಡೆಸಲಾಗುತ್ತದೆ’ ಎಂದು ಹೇಳಿದರು.

‘ಎಲ್ಲಾ ಕಾರ್ಮಿಕರಿಗೆ ₹ 18 ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ನಿಷೇಧಿಸಬೇಕು. ಬಹುರಾಷ್ಟ್ರೀಯ ಕಂಪನಿಗಳ ಕಾರ್ಮಿಕ ಕಾಯಿದೆಗಳನ್ನು ತಿದ್ದುಪಡಿ ಮಾಡಬಾರದು’ ಎಂದು ಒತ್ತಾಯಿಸಿದರು.‌

ಬೆಂಗಳೂರಿನಲ್ಲಿ ಬೆಳಿಗ್ಗೆ 9ಕ್ಕೆ ಮಿನರ್ವ ವೃತ್ತದಿಂದ ಪುರಭವನ ಮೂಲಕ ರಾಜಭವನ‌ದವರೆಗೂ ಮೆರವಣಿಗೆ ನಡೆಸಲಿವೆ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !