ಪರಿಶಿಷ್ಟರ ಆರ್ಥಿಕ ಸಬಲೀಕರಣಕ್ಕೆ ಯೋಜನೆ: ‍ಪ್ರಿಯಾಂಕ್‌ ಸೂಚನೆ

7

ಪರಿಶಿಷ್ಟರ ಆರ್ಥಿಕ ಸಬಲೀಕರಣಕ್ಕೆ ಯೋಜನೆ: ‍ಪ್ರಿಯಾಂಕ್‌ ಸೂಚನೆ

Published:
Updated:

ಬೆಂಗಳೂರು: ಪರಿಶಿಷ್ಟ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಮುಂದಿನ ಹಣಕಾಸು ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸ್ವರೂಪವನ್ನು ಬದಲಿಸಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು ಆರ್ಥಿಕವಾಗಿ ಸದೃಢರಾಗುವ ವಿನೂತನ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು’ ಎಂದರು.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !