‘ಸಂಪೂರ್ಣ ಧೂಮಪಾನ ಮುಕ್ತ ರಾಜ್ಯ– ಚಿಂತನೆ’

7
‘ಧೂಮಪಾನ ಮುಕ್ತ ಬೆಂಗಳೂರು ಅಭಿಯಾನ’ ವರದಿ ಬಿಡುಗಡೆ

‘ಸಂಪೂರ್ಣ ಧೂಮಪಾನ ಮುಕ್ತ ರಾಜ್ಯ– ಚಿಂತನೆ’

Published:
Updated:
Prajavani

ಬೆಂಗಳೂರು: ‘ರಾಜ್ಯದಲ್ಲಿ ಧೂಮಪಾನವನ್ನು ಸಂಪೂರ್ಣ ನಿಷೇಧಿಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.

ಮಲ್ಲೇಶ್ವರದಲ್ಲಿ ಶುಕ್ರವಾರ ‘ಧೂಮಪಾನ ಮುಕ್ತ ಬೆಂಗಳೂರು’ ಅಭಿಯಾನದ ವರದಿ ಹಾಗೂ ಮೊಬೈಲ್‌ ಆ್ಯಪ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಗುಜರಾತ್‌ ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡಿದ್ದಾರೆ. ಇದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಧೂಮಪಾನವನ್ನು ಸಂಪೂರ್ಣ ನಿಷೇಧಿಸುವುದು ಕಷ್ಟ. ಆದರೂ ಈ ಸಾಧ್ಯತೆ ಬಗ್ಗೆ  ಅಧಿಕಾರಿಗಳು ಪರಿಶೀಲಿಸಬೇಕು. ಕಾಲೇಜು ಸಮೀಪ ಸಿಗರೇಟು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಬೇಕು’ ಎಂದರು.

‘ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದಾಗಿ ಶೇ 72ರಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಸಿಗರೇಟು ಸೇವನೆ ಆರೋಗ್ಯ ಹಾನಿಕಾರಕ ಎಂದು ತಿಳಿ ಹೇಳಿದರೂ ಕೇಳದೇ ತಮ್ಮ ಬದುಕನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !