ಮತದಾನ ಮಹತ್ವದ ಅರಿವು ಮೂಡಿಸಿ

7

ಮತದಾನ ಮಹತ್ವದ ಅರಿವು ಮೂಡಿಸಿ

Published:
Updated:
Prajavani

ಕೋಲಾರ: ‘ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗಾಗಿ ವಿದ್ಯಾರ್ಥಿಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಮತ್ತು ಮತದಾನದ ಮಹತ್ವದ ಕುರಿತು ಅರಿವು ಮೂಡಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ‘ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಜತೆಗೆ ಜನಪ್ರಾತಿನಿಧ್ಯ ಸಂಸ್ಥೆಗಳ ಕಾರ್ಯ ಚಟುವಟಿಕೆಗಳ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಬಹುತೇಕ ಪೋಷಕರು ತಮ್ಮ ಮಕ್ಕಳು ವೈದ್ಯರು ಅಥವಾ ಎಂಜಿನಿಯರ್ ಆಗಬೇಕೆಂದು ಬಯಸುತ್ತಾರೆ. ಮಕ್ಕಳು ರಾಜಕಾರಣಿಗಳಾಗಲಿ ಎಂದು ಬಯಸುವ ಪೋಷಕರ ಸಂಖ್ಯೆ ವಿರಳ. ರಾಜಕೀಯದಲ್ಲಿ ಹೆಚ್ಚುತ್ತಿರುವ ಹಣ, ಆಮಿಷ, ಸ್ವಾರ್ಥವೇ ಇದಕ್ಕೆ ಕಾರಣ’ ಎಂದು ಅಭಿಪ್ರಾಯಪಟ್ಟರು.

ಅರಿವು ಅಗತ್ಯ: ‘ಸದನದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶ ಸಿಗಬೇಕು. ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸಬೇಕು, ವಿದ್ಯಾರ್ಥಿಗಳಲ್ಲಿ ಸದನದ ಶಕ್ತಿ ಮತ್ತು ಮಹತ್ವದ ಅರಿವು ಅಗತ್ಯ’ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಸಲಹೆ ನೀಡಿದರು.

‘ಸಭಾಧ್ಯಕ್ಷರ ತೀರ್ಮಾನದಂತೆ ಯುವ ಸಂಸತ್ ಅಣಕು ಸ್ಪರ್ಧೆ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಹಾಗೂ ಶಾಸಕಾಂಗದ ಮಹತ್ವ ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಸದನದಲ್ಲಿ ನಡೆಯುವ ಜನಪರ ಚರ್ಚೆಯ ಅರಿವುವಾಗುತ್ತದೆ. ರಾಜಕಾರಣದಲ್ಲಿ ಯುವಕರ ಭಾಗವಹಿಸುವಿಕೆಗೆ ಇದು ದಾರಿ ಮಾಡಿ ಕೊಡುತ್ತದೆ’ ಎಂದರು.

ಶಿಕ್ಷಣ ಸಚಿವೆಯಾಗಿ ಕಾರ್ಯ ನಿರ್ವಹಿಸಿದ ಬೆಮೆಲ್ ಶಾಲೆ ವಿದ್ಯಾರ್ಥಿನಿ ಹೇಮಾ ಪ್ರಿಯಾ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮತ್ತು ವಿರೋಧ ಪಕ್ಷದಲ್ಲಿ ಕಾರ್ಯ ನಿರ್ವಹಿಸಿದ ತಾತಿಕಲ್ಲು ಗ್ರಾಮದ ಆದರ್ಶ ಶಾಲೆ ವಿದ್ಯಾರ್ಥಿನಿ ಅನುಷಾ ದ್ವಿತೀಯ ಸ್ಥಾನ ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !