ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಿ

7

ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಿ

Published:
Updated:
Prajavani

ಕೋಲಾರ: ‘ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರತ್ನಯ್ಯ ಕೋರಿದರು.

ತಾಲ್ಲೂಕಿನ ಹೊಗರಿ ಗೊಲ್ಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶನಿವಾರ ಇಂಗ್ಲಿಷ್ ನಿಘಂಟು ವಿತರಿಸಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದವರೇ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.

‘ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರಗಳು ಅನೇಕ ಯೋಜನೆಗಳು ರೂಪಿಸಿದೆ. ಪೋಷಕರು ಖಾಸಗಿ ಶಾಲೆಗಳ ಮೋಹಕ್ಕೆ ಒಳಗಾಗಿರುವುದರಿಂದ ಯೋಜನೆಗಳು ಸದ್ಬಳಕೆಯಾಗುತ್ತಿಲ್ಲ. ಯೋಜನೆಗಳ ಅರಿವು ಪಡೆದುಕೊಂಡು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಸಲಹೆ ನೀಡಿದರು.

‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ವ್ಯಾಪ್ತಿಯ ಕೈಗಾರಿಕೆಗಳು, ಉದ್ಯಮಿಗಳು, ಹಳೆ ವಿದ್ಯಾರ್ಥಿಗಳ ನೆರವು ಪಡೆದು ಅಗತ್ಯ ನೆರವು ಪಡೆದುಕೊಳ್ಳ’ ಎಂದರು.

‘ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಖಾಸಗಿ ಶಾಲೆಗಳ ಮಕ್ಕಳು ಇತ್ತ ಬರುವಂತೆ ಮಾಡಬೇಕು. ಬದ್ದತೆಯಿಂದ ಕೆಲಸ ಮಾಡಿದರೆ ಮಾತ್ರ ಇಂದು ಸರ್ಕಾರಿ ಶಾಲೆ ಉಳಿಯಲು ಸಾಧ್ಯ’ ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಕ್ಷೀರಭಾಗ್ಯ, ಬಿಸಿಯೂಟ ಅನೇಕ ಪ್ರೋತ್ಸಾಹದಾಯಕ ಕಾರ್ಯಕ್ರಮ ನೀಡಲಾಗುತ್ತಿದೆ, ಇದರ ಸದ್ಬಳಕೆಗೆ ಪೋಷಕರು ಮುಂದಾಗಬೇಕು’ ಎಂದರು.

ಶಿಕ್ಷಣ ಸಂಯೋಜಕ ಶ್ರೀನಿವಾಸನ್, ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಬಸವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ವೆಂಕಟಶಿವಪ್ಪ, ಶಿಕ್ಷಕಿ ನಿರ್ಮಲಾ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !