ಚಿತ್ರಕಲಾ ಶಿಬಿರಕ್ಕೆ ಚಾಲನೆ

7

ಚಿತ್ರಕಲಾ ಶಿಬಿರಕ್ಕೆ ಚಾಲನೆ

Published:
Updated:
Prajavani

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಚಿತ್ರಕಲಾ ಶಿಕ್ಷಕರಿಗೆ ತಾಲ್ಲೂಕಿನ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿರುವ ಚಿತ್ರಕಲಾ ಶಿಬಿರಕ್ಕೆ ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಚಾಲನೆ ನೀಡಿದರು.

ಸೋಮವಾರದಿಂದ ಜನವರಿ 16ರ ವರೆಗೆ ಹತ್ತು ದಿನಗಳ ಕಾಲ ಕಾಲ ನಡೆಯುವ ಈ ಶಿಬಿರದಲ್ಲಿ ಜಿಲ್ಲಾ ಚಿತ್ರಕಲಾ ಶಿಕ್ಷಕರು ಜಿಲ್ಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳ ಕಲಾಕೃತಿಗಳನ್ನು ರಚಿಸಲಿದ್ದಾರೆ. ಶಿಬಿರದಲ್ಲಿ ಆಯ್ಕೆಯಾಗುವ ಅತ್ಯುತ್ತಮ ಕಲಾಕೃತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಪರಿವೀಕ್ಷಣಾ ಮಂದಿರದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್. ಶಿವಣ್ಣರೆಡ್ಡಿ, ಕಚೇರಿ ಸಹಾಯಕ ಕೃಷ್ಣಪ್ಪ, ವಿಷಯ ಪರಿವೀಕ್ಷಕ ಆಂಜಿನಪ್ಪ, ಚಿತ್ರಕಲಾ ಪರಿಷತ್ತಿನ ಉಪನ್ಯಾಸಕ ಜಗದೀಶ್ ಈ ಸಂದರ್ಭದಲ್ಲಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !