ಪಾವಗಡ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ

7

ಪಾವಗಡ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Published:
Updated:
Prajavani

ಪಾವಗಡ: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಮಂಗಳವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಮುಂಜಾನೆ ಆಂಧ್ರ, ಖಾಸಗಿ ಬಸ್‌ಗಳು ಸಂಚರಿಸಿದವು. ಆದರೆ, ಬೆಳಿಗ್ಗೆ 9ರ ನಂತರ ಬಸ್‌ಗಳ ಸಂಚಾರ ಸ್ಥಗಿತಗೊಂಡಿತು. ಪಟ್ಟಣದಲ್ಲಿ ಅಂಗಡಿ ಮಳಿಗೆಗಳು, ಪೆಟ್ರೋಲ್ ಬಂಕ್ ಇತ್ಯಾದಿ ವಾಣಿಜ್ಯ ಕೇಂದ್ರಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.

ಕೆಲ ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬ್ಯಾಂಕ್ ಸಿಬ್ಬಂದಿ ಮನವೊಲಿಸಿ ಬಾಗಿಲು ಮುಚ್ಚಿಸಿದರು.

ಸಿ.ಐ.ಟಿ.ಯು, ಹಮಾಲಿ ಕಾರ್ಮಿ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದಾದ್ಯಂತ ಕೆಂಪು ಭಾವುಟದೊಂದಿಗೆ ಮೆರವಣಿಗೆ ನಡೆಸಿದರು. ಶನಿ ಮಹಾತ್ಮ ದೇಗುಲದ ಬಳಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹಸಿರು ಸೇನೆ, ನಮ್ಮ ಹಕ್ಕು ಸೇರಿದಂತೆ ವಿವಿಧ ಸಂಘಟನೆಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬುಧವಾರ ನಡೆಯಲಿರುವ ಎರಡನೇ ದಿನದ ಬಂದ್‌ಗೆ ಸಾರ್ವಜನಿಕರು ಬೆಂಬಲ ನೀಡಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡಬೇಕು ಎಂದು ಸಿಐಟಿಯು ಪದಾಧಿಕಾರಿ ಸುಶೀಲಮ್ಮ ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !