ವೀರಪುಲಿಕೇಶಿ ಬ್ಯಾಂಕ್: ₹2 ಕೋಟಿಗೂ ಹೆಚ್ಚು ಮೌಲ್ಯದ ನಗ–ನಾಣ್ಯ ಕಳವು?

7
ಕುಳಗೇರಿ ಕ್ರಾಸ್: ವೀರಪುಲಿಕೇಶಿ ಬ್ಯಾಂಕ್ ಶಾಖೆಗೆ ಕನ್ನ

ವೀರಪುಲಿಕೇಶಿ ಬ್ಯಾಂಕ್: ₹2 ಕೋಟಿಗೂ ಹೆಚ್ಚು ಮೌಲ್ಯದ ನಗ–ನಾಣ್ಯ ಕಳವು?

Published:
Updated:
Prajavani

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್‌ನ ವೀರಪುಲಿಕೇಶಿ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ನಡೆದಿದೆ. ₹2 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ₹5 ಲಕ್ಷ ನಗದು ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ.

ರಾತ್ರಿ ಬ್ಯಾಂಕ್ ಹಿಂಬದಿಯ ಕಿಟಕಿಯ ಸರಳುಗಳನ್ನು ಗ್ಯಾಸ್‌ ಕಟರ್ ಬಳಸಿ ಒಳಗೆ ನುಗ್ಗಿರುವ ಕಳ್ಳರು ಲಾಕರ್ ಮುರಿದು ಕಳ್ಳತನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವ್ಯವಸ್ಥಿತ ಕಳ್ಳತನ: ಸ್ಟ್ರಾಂಗ್‌ರೂಂನ ಎಚ್ಚರಿಕೆ ಗಂಟೆಯ (ಸೈರನ್‌) ಕೇಬಲ್ ಕತ್ತರಿಸಿರುವ ಕಳ್ಳರು, ಅದು ಕೆಲಸ ಮಾಡದಂತೆ ನೋಡಿಕೊಂಡಿದ್ದಾರೆ. ಒಳಗಿನ ಎರಡು ಸಿಸಿ ಟಿವಿ ಕ್ಯಾಮೆರಾಗಳ ಮೂತಿಯನ್ನು ಆಕಾಶದತ್ತ ತಿರುಗಿಸಿದ್ದಾರೆ.

ಬೆಳಿಗ್ಗೆ ಸಿಬ್ಬಂದಿ ಬಂದು ನೋಡಿದಾಗ ಕಳ್ಳತನದ ವಿಚಾರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

₹5 ಲಕ್ಷ ನಗದು ಬ್ಯಾಂಕ್‌ನಲ್ಲಿ ಇದ್ದ ಬಗ್ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಒಡವೆಯ ಮೌಲ್ಯದ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ. ಆ ಬಗ್ಗೆ ಮಾಹಿತಿ ದೊರೆತ ನಂತರ ಕಳ್ಳರ ಪಾಲಾದ ಸೊತ್ತಿನ ವಾಸ್ತವ ಚಿತ್ರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಹಕರು ಭಯಪಡುವ ಅಗತ್ಯ ಇಲ್ಲ:  ಗ್ರಾಹಕರು ಆತಂಕಪಡುವ ಅಗತ್ಯ ಇಲ್ಲ ಎಂದು ಬಾದಾಮಿ ಮಾಜಿ ಶಾಸಕ ಹಾಗೂ ವೀರಪುಲಕೇಶಿ ಬ್ಯಾಂಕಿನ ಅಧ್ಯಕ್ಷ ಎಂ.ಕೆ. ಪಟ್ಟಣ ಶೆಟ್ಟಿ ಹೇಳಿದ್ದಾರೆ. 

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು ಪೊಲೀಸರು ತನಿಖೆ ನಡೆಸುತ್ತಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಿದ್ದಾರೆ. ಗ್ರಾಹಕರು ಭಯಪಡುವ ಅಗತ್ಯ ಇಲ್ಲ ಎಂದರು. 

 

ಬರಹ ಇಷ್ಟವಾಯಿತೆ?

 • 1

  Happy
 • 2

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !