ನಿರಾಸೆಗೆ ಸಿ.ಎಂ ವಿರುದ್ಧ ಹೇಳಿಕೆ

7

ನಿರಾಸೆಗೆ ಸಿ.ಎಂ ವಿರುದ್ಧ ಹೇಳಿಕೆ

Published:
Updated:
Prajavani

ಕೋಲಾರ: ‘ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್‌ ಅವರಿಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಸ್ಥಾನಮಾನ ದೊರೆತಿಲ್ಲ ಎಂಬ ಕಾರಣಕ್ಕೆ ನಿರಾಸೆಯಿಂದ ಮುಖ್ಯಮಂತ್ರಿಯವರ ವಿರುದ್ಧ ಹೇಳಿಕೆ ನೀಡಿರಬಹುದು’ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸುಧಾಕರ್‌ ಅವರಿಗೆ ಸಿಗಬೇಕಿದ್ದ ಸ್ಥಾನ ಕೆಲ ಮಾನದಂಡದ ಕಾರಣಕ್ಕೆ ಕೈತಪ್ಪಿದೆ. ಅವರಿಗೆ ಮುಂದೆ ಅವಕಾಶ ಕಲ್ಪಿಸಲಾಗುವುದು. ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರಿಗೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹುದ್ದೆ ಸಿಗಲಿದೆ’ ಎಂದು ಹೇಳಿದರು.

‘ಕೆ.ಸಿ ವ್ಯಾಲಿ ಯೋಜನೆ ವಿರುದ್ಧ ಡೋಂಗಿ ಪರಿಸರವಾದಿಗಳು ಹೋರಾಟ ನಡೆಸುತ್ತಿದ್ದಾರೆ. ಯೋಜನೆಯ ನೀರಿನ ಶುದ್ಧತೆ ಸಂಬಂಧ ಜನರಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ ಸಚಿವರು ತಾಲ್ಲೂಕಿನ ಉದ್ದಪ್ಪನಹಳ್ಳಿ ಕೆರೆಗೆ ಹರಿದು ಬಂದಿರುವ ಕೆ.ಸಿ ವ್ಯಾಲಿ ನೀರು ಕುಡಿದು ಸಂಸ್ಕರಿತ ನೀರು ಶುದ್ಧವಾಗಿದೆ ಎಂಬ ಸಂದೇಶ ರವಾನಿಸುವ ಪ್ರಯತ್ನ ಮಾಡಿದರು.

‘ರಾಜ್ಯ ಸರ್ಕಾರ ಕೆ.ಸಿ ವ್ಯಾಲಿ ಯೋಜನೆ ಅನುಷ್ಠಾನಕ್ಕೆ ಬದ್ಧವಾಗಿದೆ.- ಸುಪ್ರೀಂ ಕೋರ್ಟ್‌ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ನ್ಯಾಯಾಲಯಕ್ಕೆ ಸತ್ಯ ಮನವರಿಕೆ ಮಾಡಿಕೊಡಲು ಸಿದ್ಧವಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !