ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಖಚಿತ

7

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಖಚಿತ

Published:
Updated:

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಪಕ್ಷದ ಮುಖಂಡರ ಸಭೆಯಲ್ಲಿ ನಿಖಿಲ್‌ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳಲ್ಲಿ ನಿಖಿಲ್‌ ನಗರಕ್ಕೆ ಏಳೆಂಟು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಮಂಗಳವಾರ ನಗರದಲ್ಲಿ ಭತ್ತ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾಶಿ ಪೂಜೆ ಮಾಡಿದರು. ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂಬ ಸಂದೇಶ ನೀಡಿದರು.

ನಂತರ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಹೊರಗಿಟ್ಟು ಸಭೆ ನಡೆಸಿದರು. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಹಾಗೂ ಪಕ್ಷದ ಶಾಸಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ನಿಖಿಲ್‌ ಜಿಲ್ಲಾ ಪ್ರವಾಸದ ದಿನಾಂಕ ನಿಗದಿ ಮಾಡಲಾಯಿತು ಎಂದು ಮುಖಂಡರೊಬ್ಬರು ತಿಳಿಸಿದರು.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ನಿಖಿಲ್‌ ‘ನಮ್ಮ ಪಕ್ಷದ ಮುಖಂಡರು, ನನ್ನ ಅಭಿಮಾನಿಗಳು ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ನೋಡೋಣ ಎಂದಷ್ಟೇ ಹೇಳಿದ್ದೇನೆ’ ಎಂದರು.

ಬರಹ ಇಷ್ಟವಾಯಿತೆ?

  • 0

    Happy
  • 1

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !