20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

7

20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Published:
Updated:

ಹುಳಿಯಾರು: ಇಲ್ಲಿನ ಬಿಎಂಎಸ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆಯಿಂದ ಇದೇ 20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಕಾಲೇಜಿನ ಬೆಳ್ಳಿಹಬ್ಬದ ಅಂಗವಾಗಿ ಶಿಬಿರ ಆಯೋಜಿಸಿದ್ದು, ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.

ಶಿಬಿರದಲ್ಲಿ ತಜ್ಞ ವೈದ್ಯರು ರೋಗಿಗಳೊಂದಿಗೆ ಸಂಹವನ ನಡೆಸಲಿದ್ದಾರೆ. ಆರೋಗ್ಯ ತಪಾಸಣೆ ಮಾತ್ರವಲ್ಲದೆ ಆರೋಗ್ಯಕ್ಕೆ ಸಂಬಂಧಸಿದ ಯಾವುದೇ ವಿಷಯಗಳ ಬಗ್ಗೆಯೂ ಸಮಾಲೋಚನೆಗೆ ವೈದ್ಯರು ಲಭ್ಯವಾಗಲಿದ್ದಾರೆ ಎಂದು ತಿಳಿಸಿದರು.

ಪೀಪಲ್ ಟ್ರೀ ಆಸ್ಪತ್ರೆಯ ವ್ಯವಸ್ಥಾಪಕ ಕೆ.ಗುರುದತ್ ಶಣೈ ಮಾತನಾಡಿ, ಸಮಾಜದ ಎಲ್ಲ ವರ್ಗದ ಜನರಿಗೂ ಗುಣಮಟ್ಟದ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎಂಬುದು ಪೀಪಲ್ ಟ್ರೀ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದ್ರಶೇಖರ್ ಚಿಕ್ಕಮುನಿಯಪ್ಪ ಅವರ ಗುರಿಯಾಗಿದೆ. ಅವರ ಆಶಯದಂತೆ ‘ಜನ ಸ್ಪರ್ಶಿ’ ಎಂಬ ಯೋಜನೆಯಡಿ ಶಿಬಿರದ 300 ಮಂದಿ ಆರ್ಥಿಕ ದುರ್ಬಲರಿಗೆ ಸುಮಾರು ₹ 1.5 ಲಕ್ಷದಿಂದ ₹ 3 ಲಕ್ಷದವರೆಗೆ ವೆಚ್ಚವಾಗುವ ಸಂಕೀರ್ಣ ಶಸ್ತ್ರಚಿಕಿತ್ಸೆ ವೆಚ್ಚವನ್ನು ಉಚಿತವಾಗಿ ನಡೆಸಲಾಗುತ್ತದೆ ಎಂದು ಹೇಳಿದರು.

ಶಿಬಿರಕ್ಕೆ ಬರುವ ರೋಗಿಗಳು ತಾವು ಹಿಂದೆ ವೈದ್ಯರಿಗೆ ತೋರಿಸಿದ ಎಕ್ಸ್ ರೇ, ಲ್ಯಾಬ್ ರಿಪೋರ್ಟ್‌ಗಳನ್ನು ತಪ್ಪದೆ ತರುವಂತೆ ಮನವಿ ಮಾಡಿದ್ದಾರೆ. ಗೋಷ್ಟಿಯಲ್ಲಿ ಪೀಪಲ್ ಟ್ರೀ ಆಸ್ಪತ್ರೆಯ ಎಸ್.ಮಂಜುಳಾದೇವಿ, ಉಪನ್ಯಾಸಕರಾದ ಮೋಹನ್ ಕುಮಾರ್, ಆರ್.ಶಿವಯ್ಯ, ಡಾ.ವಲಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !