ಒಳ ಮೀಸಲಾತಿ ಮೂಲಕ ನ್ಯಾಯ ಒದಗಿಸಿ

7

ಒಳ ಮೀಸಲಾತಿ ಮೂಲಕ ನ್ಯಾಯ ಒದಗಿಸಿ

Published:
Updated:

ಚಿಕ್ಕಬಳ್ಳಾಪುರ: ‘ಆದಿಜಾಂಬವ ಅಭಿವೃದ್ಧಿ ನಿಗಮದ ಲೋಕಾರ್ಪಣೆ ಆಗುತ್ತಿರುವುದು ಸಂತಸ ತಂದಿದೆ. ಸರ್ಕಾರ ಇದೇ ರೀತಿ ಸದಾಶಿವ ಆಯೋಗ ವರದಿಯಂತೆ ಒಳ ಮೀಸಲಾತಿಯನ್ನು ಜಾರಿ ಮಾಡುವ ಮೂಲಕ ಮಾದಿಗ ಜನಾಂಗಕ್ಕೆ ನ್ಯಾಯವನ್ನು ಒದಗಿಸಬೇಕು’ ಎಂದು ಮಾದಿಗ ದಂಡೋರ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ.ವಿ.ವೀಣಾ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದ ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರ ಪರಿಶ್ರಮದಿಂದ ಮಾದಿಗ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ನಿಗಮ ಸ್ಥಾಪಿಸುತ್ತಿರುವುದು ನಮಗೆ ತುಂಬಾ ಸಂತಸದ ವಿಚಾರ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ (ಜ.17) ನಡೆಯುವ ನಿಗಮದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸುಮಾರು 3,000 ಮಾದಿಗ ಸಮುದಾಯದವರು ತೆರಳಲಿದ್ದಾರೆ’ ಎಂದು ಹೇಳಿದರು.

‘ಈ ಕಾರ್ಯಕ್ರಮಕ್ಕೆ ಹೋಗಲು ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದರು. ಮಾದಿಗ ದಂಡೋರ ಜಿಲ್ಲಾ ಘಟಕ ಅಧ್ಯಕ್ಷ ಎಂ.ವಿ.ರಾಮಪ್ಪ, ಜಿಲ್ಲಾ ಉಪಾಧ್ಯಕ್ಷ ಪಿ.ಎಂ.ನರಸಿಂಹಯ್ಯ, ಮುಖಂಡರಾದ ಚಂದ್ರಶೇಖರ್,ಆನೂರು ಶ್ರೀನಿವಾಸ್, ಬಿ.ವಿ.ಕೃಷ್ಣ, ಮಂಜುನಾಥ, ಮಧುಕುಮಾರ್, ಆವುಲಪ್ಪ, ಮುನಿರಾಜು, ವೆಂಕಟರವಣಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !