ಮೇಕೆದಾಟು: ರಾಜ್ಯದಿಂದ ಪರಿಷ್ಕೃತ ಡಿಪಿಆರ್‌

7

ಮೇಕೆದಾಟು: ರಾಜ್ಯದಿಂದ ಪರಿಷ್ಕೃತ ಡಿಪಿಆರ್‌

Published:
Updated:

ನವದೆಹಲಿ: ಕರ್ನಾಟಕ ಸರ್ಕಾರವು ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಸೂಚನೆಯ ಮೇರೆಗೆ ಮೇಕೆದಾಟು ಕುರಿತ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್‌) ಸಲ್ಲಿಸಿದೆ.

ಬೆಂಗಳೂರು, ರಾಮನಗರ ಮತ್ತಿತರ ನಗರಗಳ ಜನತೆಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಒಟ್ಟು ₹ 5,900 ಕೋಟಿ ವೆಚ್ಚದಲ್ಲಿ ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಮೂಲಕ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಉದ್ದೇಶಿಸಿಸಲಾಗಿದೆ ಎಂದು ರಾಜ್ಯ ಸರ್ಕಾರ ಈ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್‌ ಕಳೆದ ಫೆಬ್ರುವರಿ 16ರಂದು ತೀರ್ಪು ನೀಡಿದ ನಂತರ ರಾಜ್ಯ ಸಲ್ಲಿಸಿದ್ದ ಪ್ರಾಥಮಿಕ ಹಂತದ ವಿಸ್ತೃತ ಯೋಜನಾ ವರದಿಗೆ ಸಮ್ಮತಿ ನೀಡಿದ್ದ ಸಿಡಬ್ಲ್ಯೂಸಿ, ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅಲ್ಲದೆ, ತಮಿಳುನಾಡಿನ ಸಂಸದರು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಆಗ್ರಹಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್‌ ನೇತೃತ್ವದ ಪೀಠವು ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !