ಬಿಬಿಎಂಪಿಗೆ ನೋಟಿಸ್ ಜಾರಿಗೆ ಆದೇಶ

7

ಬಿಬಿಎಂಪಿಗೆ ನೋಟಿಸ್ ಜಾರಿಗೆ ಆದೇಶ

Published:
Updated:

ಬೆಂಗಳೂರು: ‘ನಗರದ ಬಸವನಗುಡಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಅಂದಾಜು ₹ 200 ಕೋಟಿ ಮೌಲ್ಯದ ಜಾಗವನ್ನು ಖಾಸಗಿ ಬಿಲ್ಡರ್‌ ಒತ್ತುವರಿ ಮಾಡಿ ಅಪಾರ್ಟ್‌ಮೆಂಟ್ ನಿರ್ಮಿಸುತ್ತಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಬಿಬಿಎಂಪಿಯ ಮುಖ್ಯ ಎಂಜಿನಿಯರ್, ಜಂಟಿ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿದೆ.

ಆಕ್ಷೇಪ ಏನು?: ‘ಬಸವನಗುಡಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆ.ಆರ್.ರಸ್ತೆಗೆ ಹೊಂದಿಕೊಂಡಂತಿರುವ ಸುಮಾರು 2,544 ಚದರ ಅಡಿ ಜಾಗವು ಬಿಬಿಎಂಪಿಗೆ ಸೇರಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ ಸುಮಾರು ₹ 200 ಕೋಟಿಗೂ ಅಧಿಕವಾಗಿದೆ. ಈ ಜಾಗವನ್ನು ಖಾಸಗಿ ಡೆವಲಪರ್ ಒತ್ತುವರಿ ಮಾಡಿದ್ದು ಈ ಜಾಗದಲ್ಲಿ 90 ಫ್ಲಾಟ್‌ಗಳಿರುವ ಬೃಹತ್ ಅಪಾರ್ಟ್‌ಮೆಂಟ್ ನಿರ್ಮಿಸುತ್ತಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.

 

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !