₹20 ಲಕ್ಷಕ್ಕೆ ಬೇಡಿಕೆಯಿಟ್ಟ ವಾಟ್ಸ್‌ಆ್ಯಪ್ ಸ್ನೇಹಿತ

7

₹20 ಲಕ್ಷಕ್ಕೆ ಬೇಡಿಕೆಯಿಟ್ಟ ವಾಟ್ಸ್‌ಆ್ಯಪ್ ಸ್ನೇಹಿತ

Published:
Updated:

ಬೆಂಗಳೂರು: ಮಹಿಳೆಯ ಜೊತೆ ಸಲುಗೆ ಬೆಳೆಸಿ ಲೈಂಗಿಕ ಸಂಪರ್ಕ ಸಾಧಿಸಿದ್ದ ರವಿತೇಜಾ ಪಮಿದಿಪಟ್ಟಿ ಎಂಬಾತ ಮದುವೆಯಾಗಲು ₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದ್ದು, ಆ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸಂತ್ರಸ್ತೆ ನೀಡಿರುವ ದೂರಿನನ್ವಯ, ರವಿತೇಜಾ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಪೊಲೀಸರು ಹೇಳಿದರು.

‘ಪತಿಯಿಂದ ವಿಚ್ಛೇಧನ ಪಡೆದಿದ್ದ ಮಹಿಳೆ ಹಾಗೂ ರವಿತೇಜಾ, ಒಂದೇ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿದ್ದರು. ಅದೇ ಗ್ರೂಪ್‌ನಲ್ಲಿ ಮಹಿಳೆಯ ಮೊಬೈಲ್‌ ನಂಬರ್ ಪಡೆದು ಸಂಪರ್ಕಿಸಿದ್ದ ಆರೋಪಿ, ಸ್ನೇಹ ಬೆಳೆಸಿದ್ದ’.

‘ಮದುವೆಯಾಗುವುದಾಗಿ ಮಹಿಳೆಯನ್ನು ನಂಬಿಸಿದ್ದ ಆರೋಪಿ, ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವಂತೆ ಸಂತ್ರಸ್ತೆ ಒತ್ತಾಯಿಸಲಾರಂಭಿಸಿದ್ದರು. ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ, ₹20 ಲಕ್ಷ ಕೊಟ್ಟರಷ್ಟೇ ಮದುವೆಯಾಗುವುದಾಗಿ ಬೇಡಿಕೆ ಇಟ್ಟಿದ್ದಾನೆ. ಅದರಿಂದ ನೊಂದು ಸಂತ್ರಸ್ತೆ ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !