ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸಿ

7
‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಜಾಗೃತಿ ಜಾಥಾಗೆ ಚಾಲನೆ

ಕಡ್ಡಾಯವಾಗಿ ಸಂಚಾರ ನಿಯಮಗಳ ಪಾಲಿಸಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಪ್ರತಿಯೊಬ್ಬ ಸವಾರರು ರಸ್ತೆ ಸಂಚಾರ ನಿಯಮಗಳನ್ನು ಗೌರವಿಸುವ ಜತೆಗೆ ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಹೇಳಿದರು.

ನಗರದಲ್ಲಿಇತ್ತೀಚೆಗೆ ಆಯೋಜಿಸಿದ್ದ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸವಾರರು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವ ಜತೆಗೆ ಹೆಲ್ಮೆಟ್‌, ಸೀಟ್‌ಬೆಲ್ಟ್ ಧರಿಸಿ ಚಲಾಯಿಸಬೇಕು. ಮದ್ಯಪಾನ ಮಾಡಿ ವಾಹನ ಓಡಿಸಬಾರದು. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಜತೆಗೆ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಸುಗಮ ಸಂಚಾರದ ದೃಷ್ಟಿಯಿಂದ ಸವಾರರು ವಾಹನಗಳನ್ನು ಅಡ್ಡಾದಿಡ್ಡಿ ಚಲಾಯಿಸುವುದು, ಎಲ್ಲೆಂದರಲ್ಲಿ ನಿಲ್ಲಿಸುವುದು, ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುವುದು, ಸರಕು ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವುದು, ಬೇಕಾಬಿಟ್ಟಿಯಾಗಿ ವಾಹನ ಓಡಿಸುವುದು ಮಾಡಬಾರದು. ಸಂಚಾರ ನಿಯಮಗಳ ಉಲ್ಲಂಘಿಸುವವರ ಪತ್ತೆಗಾಗಿ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಸಂಚಾರ ಠಾಣೆ ಮತ್ತು ಪ್ರಾದೇಶಿ ಸಾರಿಗೆ ಇಲಾಖೆ ಸಿಬ್ಬಂದಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಬೆಂಗಳೂರು ಗ್ರಾಮಾಂತರ ಜಂಟಿ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೀರೆಡ್ಡಿ, ಮೋಟಾರ್ ವಾಹನ ನಿರೀಕ್ಷಕ ಕಮಲ್ ಬಾಬು ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !