ಜಾಧವ್ ವಿರುದ್ಧ ಐಸಿಜೆಗೆ ಸಾಕ್ಷ್ಯ ಸಲ್ಲಿಕೆ: ಪಾಕಿಸ್ತಾನ

ಇಸ್ಲಾಮಾಬಾದ್: ‘ದೇಶದ ಮಿಲಿಟರಿ ಕೋರ್ಟ್ನಿಂದ ಗಲ್ಲು ಶಿಕ್ಷೆಗೆ ಒಳಗಾಗಿರುವ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿರುದ್ಧ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ (ಐಸಿಜೆ) ಎಲ್ಲ ಸಾಕ್ಷ್ಯ ಸಲ್ಲಿಸಲಾಗುವುದು’ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಶುಕ್ರವಾರ ಇಲ್ಲಿ ಹೇಳಿದ್ದಾರೆ.
ಜಾಧವ್ ಅವರ ಪ್ರಕರಣ ವಿಚಾರಣೆ ಫೆ. 19ರಂದು ನಡೆಯಲಿದೆ. ದೇಶದಲ್ಲಿ ಗೂಢಚಾರಿಕೆಯಲ್ಲಿ ತೊಡಗಿದ್ದಲ್ಲದೇ, ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಜಾಧವ್ ಅವರನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿತ್ತು.
ವಿಚಾರಣೆ ನಡೆಸಿದ್ದ ಮಿಲಿಟರಿ ಕೋರ್ಟ್ ಜಾಧವ್ ಅವರಿಗೆ 2017ರ ಏಪ್ರಿಲ್ನಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು.
ಈ ಶಿಕ್ಷೆಯನ್ನು ವಿರೋಧಿಸಿದ್ದ ಭಾರತ, ಅದೇ ವರ್ಷ ಮೇನಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.