ಯಡಿಯೂರಪ್ಪ ಮಾತಿನಂತೆ ನಡೆದುಕೊಳ್ಳಲಿ: ಸಿದ್ದರಾಮಯ್ಯ ಒತ್ತಾಯ

7

ಯಡಿಯೂರಪ್ಪ ಮಾತಿನಂತೆ ನಡೆದುಕೊಳ್ಳಲಿ: ಸಿದ್ದರಾಮಯ್ಯ ಒತ್ತಾಯ

Published:
Updated:

ಬಾಗಲಕೋಟೆ: ‘ಆಡಿಯೋದಲ್ಲಿ ಇರುವುದು ನನ್ನದೇ ಧ್ವನಿಯಾಗಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಯಡಿಯೂರಪ್ಪ ಹೇಳಿದ್ದರು. ತಮ್ಮದೇ ಧ್ವನಿ ಎಂದು ಈಗ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ಹೇಳಿದಂತೆ ನಡೆದುಕೊಳ್ಳಲಿ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ತಮ್ಮ ಮಾತಿಗೆ ಯಡಿಯೂರಪ್ಪ ಬದ್ಧವಾಗಲಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ’ ಎಂದು ಆಗ್ರಹಿಸಿದರು. 

ಹುಬ್ಬಳ್ಳಿಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದಲ್ಲಿ ಭಾನುವಾರ ನಡೆಯುತ್ತಿರುವ ಕೇಂದ್ರಸರ್ಕಾರದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,  ‘ನರೇಂದ್ರ ಮೋದಿಗೆ ಯಾವುದೇ ಪ್ರೋಟೊಕಾಲ್ (ಶಿಷ್ಟಾಚಾರ) ಗೊತ್ತಿಲ್ಲ. ರಾಜಕೀಯ ಭಾಷಣ ಮಾಡುವುದಕ್ಕಾಗಿ ಹುಬ್ಬಳ್ಳಿಗೆ ಬರುತ್ತಿದ್ದಾರೆ. ನಾವು ಅವರನ್ನು ರಾಜಕೀಯವಾಗಿಯೇ ಎದುರಿಸಲಿದ್ದೇವೆ ಎಂದರು.

‘ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನದಿಂದ ವೀಣಾ ಕಾಶಪ್ಪನವರ ರಾಜೀನಾಮೆ ಕೊಡಿಸುವ ಬಗ್ಗೆ ಸೋಮವಾರ ನಿರ್ಧಾರ ಕೈಗೊಳ್ಳುವೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !